ಮಂಗಳವಾರ, ಜೂನ್ 28, 2022
27 °C

ಉಚಿತ ಲಸಿಕೆಗಾಗಿ ಕೇಂದ್ರಕ್ಕೆ ಒತ್ತಾಯ: ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರಂ: ದೇಶದ ಎಲ್ಲ ರಾಜ್ಯಗಳಿಗೂ ಉಚಿತವಾವಾಗಿ ಕೋವಿಡ್ ಲಸಿಕೆ ವಿತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ಸಂಬಂಧ ಮಂಡಿಸಿದ ನಿರ್ಣಯವನ್ನು ಕೇರಳದ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು.

ರಾಜ್ಯದಲ್ಲಿ ತೀವ್ರವಾಗಿ ಕೋವಿಡ್ ಲಸಿಕೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ವೀಣಾ ಜಾರ್ಜ್ ಅವರು ಬುಧವಾರ ಸದನದಲ್ಲಿ ಈ ನಿರ್ಣಯವನ್ನು ಮಂಡಿಸಿದರು. ಇದೇ ವೇಳೆ ಸಕಾಲಿಕವಾಗಿ ಲಸಿಕೆ ವಿತರಿಸುವಂತೆ ನಿರ್ಣಯದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

‘ಕೋವಿಡ್‌–19 ವಿರುದ್ಧ ಹೋರಾಡುವುದಕ್ಕಾಗಿ ನಾವು ಸಮಾಜದ ಎಲ್ಲ ವರ್ಗದವರಿಗೂ ಉಚಿತವಾಗಿ  ಲಸಿಕೆ ಒದಗಿಸಬೇಕು. ಇದರಿಂದ ಸಮಾಜವನ್ನು ವೈರಸ್‌ನಿಂದ ರಕ್ಷಿಸಿದಂತಾಗುತ್ತದೆ‘ ಎಂದು ಜಾರ್ಜ್ ಹೇಳಿದರು.

ಕೋವಿಡ್ 19 ಸಾಂಕ್ರಾಮಿಕದ ಮೊದಲ ಅಲೆ, ದೇಶದ ಆರ್ಥಿಕತೆಯನ್ನು ದುರ್ಬಲಗೊಳಿಸಿದೆ. ಈಗ ದೇಶವು ಎರಡನೇ ಅಲೆಯನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಲಸಿಕೆ ನೀಡುವುದನ್ನು ವೇಗಗೊಳಿಸಿದರೆ, ದೇಶದ ಆರ್ಥಿಕತೆಯ ಸುಧಾರಣೆಗೆ ಸಹಾಯವಾಗುತ್ತದೆ‘ ಎಂದು ಅವರು ಅಭಿಪ್ರಾಯಪಟ್ಟರು.‌ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮತ್ತು ಸಮಾಜದ ಎಲ್ಲ ವರ್ಗದವರಿಗೂ ಲಸಿಕೆ ನೀಡುವುದಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಆಡಳಿತಾರೂಢ ಎಲ್‌ಡಿಎಫ್‌ ಮತ್ತು ಯುಡಿಎಫ್‌ ಸದಸ್ಯರು ಸಣ್ಣ ಬದಲಾವಣೆಗಳನ್ನು ಸೂಚಿಸಿದ ನಂತರ ನಿರ್ಣಯವನ್ನು ಸರ್ವಾನುಮತದಿಂದ ಬೆಂಬಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು