ಗುರುವಾರ , ಡಿಸೆಂಬರ್ 3, 2020
23 °C

ವಿಮಾನ ನಿಲ್ದಾಣ ಖಾಸಗೀಕರಣದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರಂ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ಗೆ ಗುತ್ತಿಗೆ ನೀಡುವ ಕೇಂದ್ರ ಸಚಿವ ಸಂಪುಟದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲಾಯಿತು.

ಈ ನಿರ್ಣಯವನ್ನು ಅಂಗೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, 'ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯ ವಿಶೇಷ ಉದ್ದೇಶದ ಘಟಕದಲ್ಲಿ (ಸ್ಪೆಷಲ್ ಪರ್ಪಸ್‌ ವೆಹಿಕಲ್– ಎಸ್‌ಪಿವಿ) ರಾಜ್ಯ ಸರ್ಕಾರದ ಪಾಲೂ ಇದ್ದು, ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಹೇಳಿದರು.

'ವಿಮಾನ ನಿಲ್ದಾಣ ನಿರ್ವಹಣೆಗೆ ಅದಾನಿ ಎಂಟರ್‌ಪ್ರೈಸಸ್ ಉಲ್ಲೇಖಿಸಿದ ಮೊತ್ತವನ್ನು ರಾಜ್ಯ ಸರ್ಕಾರ ನೀಡಲು ಒಪ್ಪಿದ್ದರೂ, ಕೇಂದ್ರ ಸರ್ಕಾರ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಲು ಹೊರಟಿರುವುದು ಸರಿಯಾದ ನಿರ್ಧಾರವಲ್ಲ’ ಎಂದು ಅವರು ಹೇಳಿದರು.

ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲ್ ಅವರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದರ ವಿರುದ್ಧದ ನಿರ್ಣಯವನ್ನು ಸದನದಲ್ಲಿ ಬೆಂಬಲಿಸಿದ್ದರೂ, ಸದನದ ಹೊರಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ' ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು