ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಕೋವಿಡ್‌

Last Updated 8 ಏಪ್ರಿಲ್ 2021, 13:52 IST
ಅಕ್ಷರ ಗಾತ್ರ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕಣ್ಣೂರ್‌ನ ಸ್ವಗ್ರಾಮದಲ್ಲಿ ಪಿಣರಾಯಿ ವಿಜಯನ್‌ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಅವರಿಗೆ ಸೋಂಕು ಲಕ್ಷಣಗಳು ಕಂಡು ಬಂದಿಲ್ಲ, ಅವರನ್ನು ಕೋಯಿಕೋಡ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆತರಲಾಗುತ್ತದೆ ಎಂದು ಸಿಎಂ ಕಾರ್ಯಾಲಯ ಪ್ರಕಟಿಸಿದೆ.

ಮಾರ್ಚ್‌ 3ರಂದು ಸಿಎಂ ಪಿಣರಾಯಿ ವಿಜಯನ್‌ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ತೆಗೆದುಕೊಂಡಿದ್ದರು.

'ನನಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. ಕೋಯಿಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆಗೆ ಒಳಗಾಗಿ' ಎಂದು ಸಿಎಂ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಅವರ ಮಗಳು ವೀಣಾ ವಿಜಯನ್‌ ಅವರಿಗೆ ಎರಡು ದಿನಗಳ ಹಿಂದೆ ಕೋವಿಡ್‌ ದೃಢಪಟ್ಟಿತ್ತು.

ಕೇರಳ ವಿಧಾನಸಭೆಗೆ ಏಪ್ರಿಲ್‌ 6ರಂದು ಮತದಾನ ನಡೆದಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT