ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾರಣಕ್ಕೆ ಅಮೆರಿಕಗೆ ತೆರಳಲಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌

Last Updated 7 ಜನವರಿ 2022, 14:09 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳ ಮುಖ್ಯಮಂತ್ರಿಪಿಣರಾಯಿ ವಿಜಯನ್‌ ಅವರು ವೈದ್ಯಕೀಯ ಕಾರಣಕ್ಕಾಗಿ ಇದೇ 15ರಂದು ಅಮೆರಿಕಕ್ಕೆ ತೆರಳಲಿದ್ದಾರೆ.

2018ರಲ್ಲಿಯೂ ಅವರು ಮೆಯೋ ಕ್ಲಿನಿಕ್‌,ರೋಚೆಸ್ಟರ್, ಮಿನ್ನೆಸೋಟಾಗೆ ಚಿಕಿತ್ಸೆಗಾಗಿ ತೆರಳಿದ್ದರು. ಆದರೆ, ಈವರೆಗೂ ಅವರ ಅನಾರೋಗ್ಯದ ವಿವರಗಳನ್ನು ಬಹಿರಂಗಪಡಿಸಿಲ್ಲ.

‘ಪಿಣರಾಯಿ ಅವರೊಂದಿಗೆ ಪತ್ನಿ ಹಾಗೂ ಸಿಬ್ಬಂದಿ ಅಮೆರಿಕಕ್ಕೆ ಹೋಗಲಿದ್ದು, ಜ.29ರಂದು ಹಿಂತಿರುಗಲಿದ್ದಾರೆ. ಈ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT