ಶುಕ್ರವಾರ, ಮೇ 14, 2021
22 °C

ಕೋವಿಡ್–19: ಕೇರಳ ಸಿಎಂ ಪಿಣರಾಯಿ ವಿಜಯನ್ ಗುಣಮುಖ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಏಪ್ರಿಲ್‌ 8ರಂದು ಅವರಿಗೆ ಸೋಂಕು ದೃಢಪಟ್ಟಿತ್ತು.

ಆಸ್ಪತ್ರೆಗೆ ದಾಖಲಾದ ಏಳು ದಿನಗಳ ಬಳಿಕ ವಿಜಯನ್‌ ಅವರಿಗೆ ಕೋವಿಡ್‌ ನೆಗೆಟಿವ್‌ ವರದಿ ಬಂದಿದ್ದು, ಬುಧವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯನ್, ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಾರ್ಚ್‌ 3 ರಂದು ಲಸಿಕೆ ಹಾಕಿಸಿಕೊಂಡಿದ್ದರು. ಆದರೆ, ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಸಲುವಾಗಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದರು. ಏಪ್ರಿಲ್‌ 6 ರಂದು ಮತದಾನ ನಡೆದಿದ್ದು, ಫಲಿತಾಂಶ ಮೇ 2ರಂದು ಹೊರಬೀಳಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು