ಬುಧವಾರ, ಮೇ 25, 2022
30 °C

ಕೇರಳದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಲು ಪ್ರಧಾನಿ ಮೋದಿಗೆ ಪಿಣರಾಯಿ ವಿಜಯನ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳದ ಸ್ತಬ್ಧಚಿತ್ರವನ್ನು ಸೇರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಮೋದಿ ಅವರಿಗೆ ಪಿಣರಾಯಿ ಪತ್ರ ಬರೆದಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರು ಅವರ ಪ್ರತಿಮೆ ಒಳಗೊಂಡ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರದ ನಿರ್ಧಾರಕ್ಕೆ ಕೇರಳದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ.

‘ಪ್ರಸ್ತಾವಿತ ಸ್ತಬ್ಧಚಿತ್ರವು ಪ್ರಬಲ ಸಾಮಾಜಿಕ ಸಂದೇಶವನ್ನು ಒಳಗೊಂಡಿದೆ. ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ಹೆಚ್ಚು ಪ್ರಸ್ತುತವಾಗಿದೆ. ಕೇರಳದ ನವೋದಯ ಚಳವಳಿಯ ನೇತೃತ್ವ ವಹಿಸಿದ್ದ ಶ್ರೀ ನಾರಾಯಣ ಗುರುಗಳ ಚಿಂತನೆಗಳು ವಿಶ್ವದಾದ್ಯಂತ ಗಮನ ಸೆಳೆದಿದ್ದವು. ಇದರ ಚಿತ್ರಣ ಸ್ತಬ್ಧಚಿತ್ರದಲ್ಲಿ ಅಡಕಗೊಂಡಿದೆ. ಹೀಗಾಗಿ ಸ್ತಬ್ಧಚಿತ್ರವು ಯುವ ಪೀಳಿಗೆಗೆ ಅಮೂಲ್ಯ ಸಂದೇಶವನ್ನು ಸಾರಲಿದೆ’ ಎಂದು ಮೋದಿಗೆ ಬರೆದ ಪತ್ರದಲ್ಲಿ ಪಿಣರಾಯಿ ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು