ತಿರುವನಂತಪುರ: ರಾಷ್ಟ್ರೀಯ ಹೆದ್ದಾರಿ 66 ಅನ್ನು ಷಟ್ಪಥವನ್ನಾಗಿ ಅಭಿವೃದ್ಧಿಪಡಿಸಲು ಮಂಜೂರಾತಿ ನೀಡಿರುವುದಕ್ಕಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಷಟ್ಪಥ ನಿರ್ಮಾಣವಾದ ನಂತರ ಕೇರಳದಲ್ಲಿ ವಾಹನಗಳ ಸಂಚಾರ ಮತ್ತಷ್ಟು ಸುಗಮ ಹಾಗೂ ಸುರಕ್ಷಿತವಾಗಲಿದೆ’ ಎಂದು ಹೇಳಿದ್ದಾರೆ.

ರಾ.ಹೆ.66ರ ಪೈಕಿ ತ್ರಿಶ್ಶೂರ್ ಜಿಲ್ಲೆಯ ಕೋಡುಂಗಲ್ಲೂರು ಹಾಗೂ ಎರ್ನಾಕುಲಂ ಜಿಲ್ಲೆಯ ಎಡಪಳ್ಳಿವರೆಗಿನ ರಸ್ತೆಯನ್ನು ₹ 3,465.82 ಕೋಟಿ ವೆಚ್ಚದಲ್ಲಿ ಷಟ್ಪಥವನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಭಾರತ್ ಮಾಲಾ’ ಯೋಜನೆಯಡಿ ಈ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.