ಬುಧವಾರ, ಆಗಸ್ಟ್ 10, 2022
20 °C

ಎಡ ಪಕ್ಷದ ಕಾರ್ಯಕರ್ತರಿಂದ ಜೀವ ಬೆದರಿಕೆ: ಕೇರಳ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಎಡ ಪಕ್ಷದ ಕಾರ್ಯಕರ್ತರು ತಮ್ಮನ್ನು ನಿಂದಿಸಿದ್ದಲ್ಲದೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಲತ್ತೂರ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ಆರೋಪಿಸಿದ್ದಾರೆ.

ಅಲತ್ತೂರ್‌ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮತ್ತು ಇತರ ಏಳು ಮಂದಿ ತಮ್ಮನ್ನು ನಿಂದಿಸಿದ್ದು, ಜೀವ ಬೆದರಿಕೆಯೊಡ್ಡಿದ್ದಾರೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಕೆಲವು ಮಹಿಳಾ ಕಾರ್ಯಕರ್ತರ ಜತೆ ಮಾತುಕತೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಸದೆ ಉಲ್ಲೇಖಿಸಿದ್ದಾರೆ.

ಬೆದರಿಕೆಯೊಡ್ಡಿದ್ದನ್ನು ಪ್ರತಿಭಟಿಸಿ ರಸ್ತೆಯಲ್ಲಿ ಧರಣಿ ನಡೆಸಿದ ಅವರು ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು