ಮಂಗಳವಾರ, ಮಾರ್ಚ್ 21, 2023
28 °C

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಕೇರಳ ಕಾಂಗ್ರೆಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಇಲ್ಲಿನ ಪ್ರಸಿದ್ಧ ಪ್ರವಾಸಿತಾಣ ಶಂಖುಮುಖಮ್ ಕಡಲತೀರದಲ್ಲಿ ಬಿಬಿಸಿ ನಿರ್ಮಿತ ಸಾಕ್ಷ್ಯಚಿತ್ರವನ್ನು ಕಾಂಗ್ರೆಸ್ ಗುರುವಾರ ಸಂಜೆ  ಪ್ರದರ್ಶಿಸಿತು. ಪ್ರವಾಸಕ್ಕೆ ಬಂದಿದ್ದ ಸಾಕಷ್ಟು ಸಂಖ್ಯೆಯ ಜನರು ಸಾಕ್ಷ್ಯಚಿತ್ರ ವೀಕ್ಷಿಸಿದರು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆ ಒದಗಿಸಿದ್ದರು. 

ಚಿತ್ರ ಪ್ರದರ್ಶನ ವಿರೋಧಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುಂದಾಗಿದ್ದರು. ಆದರೆ, ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರಿಂದ, ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ. ಸಾಕ್ಷ್ಯಚಿತ್ರ ಹೆಚ್ಚು ಜನರನ್ನು ತಲುಪಬೇಕು ಎಂಬ ಉದ್ದೇಶದಿಂದ ಕಡಲತೀರದಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಬಾಬು ಅವರು ಹೇಳಿದ್ದಾರೆ.

ಮುಂಬೈನಲ್ಲೂ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ ನಡೆಸಲಾಗಿದೆ. ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ನ (ಟಿಸ್) ‘ದಿ ಪ್ರೊಗ್ರೆಸಿವ್ ಸ್ಟೂಡೆಂಟ್ಸ್ ಫೋರಂ (ಪಿಎಸ್‌ಎಫ್) ಪ್ರದರ್ಶನ ಆಯೋಜಿಸಿದೆ. ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಪ್ರದರ್ಶನ ಆಯೋಜಿಸಲಾಗಿದೆ ಎಂದು ಸಂಘಟಕರು ಹೇಳಿದ್ದಾರೆ. ಚಿತ್ರ ಪ್ರದರ್ಶನಕ್ಕೆ ಟಿಸ್‌ನ ಎಲ್ಲ ವಿದ್ಯಾರ್ಥಿಗಳು ಶನಿವಾರ ಹಾಜರಾಗಬೇಕು ಎಂದು ವಿದ್ಯಾರ್ಥಿ ಸಂಘಟನೆ ಮನವಿ ಮಾಡಿದೆ. ಪ್ರದರ್ಶನಕ್ಕೆ ಆಡಳಿತ ಮಂಡಳಿ ಇನ್ನಷ್ಟೇ ಅನುಮತಿ ನೀಡಬೇಕಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು