ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ: ಜಾರ್ಜ್‌ ಜಾಮೀನು ಅರ್ಜಿ ತಿರಸ್ಕಾರ

Last Updated 21 ಮೇ 2022, 12:30 IST
ಅಕ್ಷರ ಗಾತ್ರ

ಕೊಚ್ಚಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕೇರಳ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಸಿ.ಜಾರ್ಜ್‌ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿದೆ.

ಮೇ 10ರಂದು ಎರ್ನಾಕುಳಂನ ವೆನ್ನೆಲ ದೇವಸ್ಥಾನ ಉತ್ಸವಕ್ಕೆ ಸಂಬಂಧಿಸಿದಂತೆ ಪಿ.ಸಿ.ಜಾರ್ಜ್‌ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಜಾರ್ಜ್‌ ಅವರ ವಿರುದ್ಧ ಸೆಕ್ಷನ್ 153 (ವಿಭಿನ್ನ ಗುಂಪುಗಳ ನಡುವೆ ದ್ವೇಷ ಭಾವನೆ ಬಿತ್ತುವುದು) ಹಾಗೂ 295 ಎ ಅಡಿ (ಉದ್ಧೇಶಪೂರ್ವಕವಾಗಿ ಮತ್ತು ದುರುದ್ದೇಶದಿಂದಪೂರಿತವಾಗಿ ಒಂದು ಧರ್ಮದ ಧಾರ್ಮಿಕ ನಂಬಿಕೆಗಳು ಹಾಗೂ ಧಾರ್ಮಿಕ ಭಾವನೆಗಳ ಮೇಲೆ ಅವಹೇಳನ ಮಾಡುವುದು) ಪ್ರಕರಣ ದಾಖಲಿಸಿದ್ದರು.

ಮುಸ್ಲಿಮರ ರೆಸ್ಟೋರೆಂಟ್‌ಗಳಲ್ಲಿ ನೀಡುವ ಚಹಾಕ್ಕೆ ನಪುಂಸಕತ್ವಕ್ಕೆ ಕಾರಣವಾಗುವ ಹನಿಯನ್ನು ಸೇರಿಸಲಾಗುತ್ತಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT