ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಅತ್ಯಾಚಾರ ಪ್ರಕರಣ: ಫ್ರಾಂಕೊ ಮುಲಕ್ಕಲ್‌ ವಿರುದ್ಧ ಆರೋಪ ನಿಗದಿ

ಪಿಟಿಐ Updated:

ಅಕ್ಷರ ಗಾತ್ರ : | |

ಬಿಷಪ್‌ ಫ್ರಾಂಕೊ ಮುಲಕ್ಕಲ್‌

ಕೋಟಯಂ, ಕೇರಳ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಷಪ್‌ ಫ್ರಾಂಕೊ ಮುಲಕ್ಕಲ್‌ ಅವರ ಮೇಲೆ ನ್ಯಾಯಾಲಯವೊಂದು ಗುರುವಾರ ಆರೋಪ ನಿಗದಿ ಮಾಡಿದೆ. 

ಭಾರತೀಯ ದಂಡ ಸಂಹಿತೆ(ಐಪಿಸಿ) ಅಡಿ ಅತ್ಯಾಚಾರದ ಶಿಕ್ಷ ಸಹಿತ ವಿವಿಧ ಸೆಕ್ಷನ್‌ಗಳ ಅಡಿ ಮುಲಕ್ಕಲ್‌ ಅವರ ವಿರುದ್ಧ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಆರೋಪ ನಿಗದಿ ಮಾಡಿದೆ. ಆದರೆ ಈ ಆರೋಪಗಳನ್ನೆಲ್ಲಾ ಮುಲಕ್ಕಲ್‌ ತಿರಸ್ಕರಿಸಿದರು. ಸೆ.16ಕ್ಕೆ ವಿಚಾರಣೆ ಮುಂದೂಡಲಾಯಿತು. 

ಕಳೆದ ವಾರವಷ್ಟೇ ಮುಲಕ್ಕಲ್‌ ಅವರಿಗೆ ನ್ಯಾಯಾಲಯ ಕಠಿಣ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆ ದಿನಾಂಕದಂದು ತಪ್ಪದೇ ಹಾಜರಾಗುವಂತೆ ಸೂಚಿಸಿತ್ತು. ತನ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ವಜಾಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು.    

2014ರಿಂದ 2016ರವರೆಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು 2018 ಜೂನ್‌ನಲ್ಲಿ ಕ್ರೈಸ್ತ ಸನ್ಯಾಸಿನಿ ಕೋಟಯಂನಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಇದನ್ನು ಆಧರಿಸಿ, ವಿಶೇಷ ತನಿಖಾ ತಂಡ ಮುಲಕ್ಕಲ್‌ ಅವರನ್ನು ಬಂಧಿಸಿತ್ತು.   

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು