ಬುಧವಾರ, ಡಿಸೆಂಬರ್ 1, 2021
20 °C

ಪೋಷಕರೇ ನನ್ನ ಮಗುವನ್ನು ಅಪಹರಿಸಿದ್ದಾರೆ: ಕೇರಳದ ಸಿಪಿಎಂ ನಾಯಕರ ಪುತ್ರಿ ದೂರು

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ನನ್ನ ಮಗುವನ್ನು ಹುಟ್ಟಿದ ಕೂಡಲೇ ಪೋಷಕರು ಅಪಹರಿಸಿದ್ದಾರೆ ಎಂದು ಆರೋಪಿಸಿರುವ ಸಿಪಿಎಂನ ಹಿರಿಯ ನಾಯಕ ಪಿ.ಎಸ್. ಜಯಚಂದ್ರನ್ ಅವರ ಪುತ್ರಿ ಅನುಪಮಾ ಎಸ್.ಚಂದ್ರನ್‌, ಮಗುವನ್ನು ವಾಪಸ್ ಕೊಡಿಸುವಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.

‘ಕಳೆದ ಏಪ್ರಿಲ್‌ನಿಂದ ಹಲವು ಬಾರಿ ಪೊಲೀಸರಿಗೆ ದೂರು ನೀಡಿದ್ದೇನೆ. ಆದರೆ, ಪೊಲೀಸರು ಜಯಚಂದ್ರನ್ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲು ಹಿಂಜರಿಯುತ್ತಿದ್ದಾರೆ‘ ಎಂದು ಅನುಪಮಾ ಆರೋಪಿಸಿದ್ದಾರೆ.‌

ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಪಮಾ ಅವರ ಪೋಷಕರು, ಸಹೋದರಿ ಮತ್ತು ಪತಿ ಮತ್ತು ತಂದೆಯ ಇಬ್ಬರು ಸ್ನೇಹಿತರು ಸೇರಿದಂತೆ ಆರು ಮಂದಿ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ. ಕಾನೂನು ವಿಭಾಗದಿಂದ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದ ಕಾರಣ, ದೂರು ದಾಖಲಿಸುವುದು ವಿಳಂಬವಾಯಿತು ಎಂದು ಹೇಳಿದ್ದಾರೆ.

ಬಂಧಿತರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ದೂರು ಸಲ್ಲಿಸಿದ್ದರೂ, ಮಗುವನ್ನು ಮರಳಿ ಕೊಡಿಸಲು ನನಗೆ ಯಾರೂ ಸಹಾಯ ಮಾಡಿಲ್ಲ‘ ಎಂದು ಅನುಪಮಾ ಅವರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು