ಶುಕ್ರವಾರ, ಜನವರಿ 28, 2022
25 °C

ಶಬರಿಮಲೆಯ ತೀರ್ಥ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ; ಕೇರಳ ಸಚಿವರ ವಿರುದ್ಧ ಆಕ್ರೋಶ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಪ್ರಸಿದ್ಧ ಶಬರಿಮಲೆ ದೇವಸ್ಥಾನದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ ಮಾಡಿರುವ ಸಂಬಂಧ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.

ಶಬರಿಮಲೆಯಲ್ಲಿ ಎರಡು ತಿಂಗಳ ಕಾಲ ನಡೆಯಲಿರುವ ಮಂಡಳಂ-ಮಕರವಿಳಕ್ಕು ವಾರ್ಷಿಕ ಧಾರ್ಮಿಕ ಯಾತ್ರೆಗೆ ಚಾಲನೆ ದೊರಕಿದೆ.

ತೀರ್ಥಯಾತ್ರೆಯ ಕಾಲಘಟ್ಟದಲ್ಲಿ ದೇವಸ್ಥಾನದ ಬಾಗಿಲು ತೆರೆಯಲು ಹಾಗೂ ಭಕ್ತರನ್ನು ಸ್ವಾಗತಿಸಲು ಸೋಮವಾರ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅನಂತಗೋಪನ್ ಮತ್ತು ಸ್ಥಳೀಯ ಶಾಸಕ ಪ್ರವೋದ್ ನಾರಾಯಣನ್ ಅವರೊಂದಿಗೆ ಸಚಿವರು ದೇವಸ್ಥಾನಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: 

ಪುರೋಹಿತರು ನೀಡಿದ ತೀರ್ಥ ಪ್ರಸಾದವನ್ನು ಸ್ವೀಕರಿಸಿದ ಸಚಿವರು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಕೇರಳ ಸಚಿವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳು ವ್ಯಕ್ತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು