ಗುರುವಾರ , ಅಕ್ಟೋಬರ್ 1, 2020
24 °C
ಕೇರಳ: ಚಿನ್ನ ಕಳ್ಳ ಸಾಗಣೆ ಪ್ರಕರಣ

ತಮಿಳುನಾಡಿನಲ್ಲಿ ಅಕ್ಕಸಾಲಿಗ ಮನೆ ಮೇಲೆ ಎನ್‌ಐಎ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಯಮತ್ತೂರು (ತಮಿಳುನಾಡು): ಕೇರಳದಿಂದ ವರದಿಯಾದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಇಲ್ಲಿನ ಅಕ್ಕಸಾಲಿಗರೊಬ್ಬರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಶೋಧ ಕಾರ್ಯ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಕುಮಾರ್‌ ಎಂಬುವರ ಮನೆ ಮೇಲೆ  ಎನ್ಐಎದ ನಾಲ್ವರು ಸದಸ್ಯರ ತಂಡ ದಾಳಿ ನಡೆಸಿತು. ನಂದಕುಮಾರ್‌ ಅವರನ್ನು ವಿಚಾರಣೆಗಾಗಿ  ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಜುಲೈ 5ರಂದು ₹ 14.82 ಕೋಟಿ ಮೌಲ್ಯದ 30 ಕೆ.ಜಿ. ಚಿನ್ನ ಅಕ್ರಮ ಸಾಗಣೆ ಪ್ರಕರಣವನ್ನು ತಿರುವನಂತಪುರದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಪ್ರಮುಖ ಸಂಚುಕೋರರಾದ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಕಾನ್ಸುಲೇಟ್‌ನ ಮಾಜಿ ಉದ್ಯೋಗಿ  ಸ್ವಪ್ನ ಸುರೇಶ್‌ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು