ಭಾನುವಾರ, ಏಪ್ರಿಲ್ 18, 2021
32 °C
ಚಿನ್ನ ಕಳ್ಳ ಸಾಗಣೆ ಪ್ರಕರಣದ 10 ಆರೋಪಿಗಳಿಗೆ ಕೇರಳ ಹೈಕೋರ್ಟ್‌ :ಜಾಮೀನು

ಚಿನ್ನ ಕಳ್ಳಸಾಗಣೆಯು ಭಯೋತ್ಪಾದಕ ಕೃತ್ಯ ಕಾಯ್ದೆಗೆ ಒಳಪಡುವುದಿಲ್ಲ: ಕೇರಳ ಹೈಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ‘ಚಿನ್ನ ಕಳ್ಳ ಸಾಗಣೆ ಕಸ್ಟಮ್ಸ್‌ ಕಾಯ್ದೆಯ ವ್ಯಾಪ್ತಿಗೆ ಬರುವುದರಿಂದ, ಇದನ್ನು ಭಯೋತ್ಪಾದಕ ಕೃತ್ಯ ಕಾಯ್ದೆಯಡಿ ವ್ಯಾಖ್ಯಾನಿಸಲು ಬರುವುದಿಲ್ಲ’ ಎಂದು ಕೇರಳ ಹೈಕೋರ್ಟ್‌ ಶನಿವಾರ ತಿಳಿಸಿತು.

ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗಪಡಿಸಿಕೊಂಡು ಚಿನ್ನ ಕಳ್ಳ ಸಾಗಣೆ ಮಾಡಿದ ಪ್ರಕರಣದ ಹತ್ತು ಆರೋಪಿಗಳಿಗೆ ಎನ್‌ಐಎ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತು.

ನ್ಯಾಯಮೂರ್ತಿಗಳಾದ ಎ. ಹರಿಪ್ರಸಾದ್ ಮತ್ತು ಎಂ.ಅನಿತಾ ಅವರನ್ನೊಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕಳೆದ ವರ್ಷ ಜುಲೈ 5 ರಂದು ಕೇರಳದಲ್ಲಿ ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗಪಡಿಸಿಕೊಂಡು ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಗಣೆ ಮಾಡುತ್ತಿದ್ದ ₹15 ಕೋಟಿ ಮೌಲ್ಯದ 30 ಕೆ.ಜಿ ಬಂಗಾರವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಪ್ರಕರಣದ ತನಿಖೆ ನಡೆಸಿದ ಎನ್‌ಐಎ ಜುಲೈ 11ರಂದು ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಹಾಗೂ ಅವರ ಜೊತೆಗಿದ್ದ ಸಂದೀಪ್‌ ನಾಯರ್‌ ಎಂಬುವರನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು