ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರ ವಜಾ- ರಾಜಭವನ ತಲುಪಿದ ಸುಗ್ರೀವಾಜ್ಞೆ

Last Updated 12 ನವೆಂಬರ್ 2022, 10:33 IST
ಅಕ್ಷರ ಗಾತ್ರ

ತಿರುವನಂತಪುರ: ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ವಜಾಗೊಳಿಸುವ ತನ್ನ ಸುಗ್ರೀವಾಜ್ಞೆಯನ್ನು ಕೇರಳ ಸರ್ಕಾರ ರಾಜಭವನಕ್ಕೆ ಅನುಮೋದನೆಗಾಗಿ ಕಳುಹಿಸಿದೆ. ಈ ಸಂಬಂಧ ಕೆಲ ದಿನಗಳ ಹಿಂದೆಯೇ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಸ್ಥಾನದಿಂದ ವಜಾ ಮಾಡಿ ಅವರ ಸ್ಥಾನಕ್ಕೆ ಖ್ಯಾತ ಶಿಕ್ಷಣ ತಜ್ಞರನ್ನು ನೇಮಕ ಮಾಡುವಂತೆ ಹೊರಡಿಸಲಾಗಿರುವ ಸುಗ್ರೀವಾಜ್ಞೆ ತಲು‍ಪಿರುವುದಾಗಿ ರಾಜಭವನದ ಮೂಲಗಳು ಖಚಿತಪಡಿಸಿವೆ.

ಆದರೂ, ಈ ವಿಷಯದ ಬಗ್ಗೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಭಿನ್ನಮತ ಶಮನವಾಗದ ಕಾರಣ ಶೀಘ್ರ ಹೊಸ ನೇಮಕ ಮಾಡುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬುಧವಾರ ಸುಗ್ರೀವಾಜ್ಞೆಯನ್ನು ಹೊರತರಲು ನಿರ್ಧರಿಸಿತ್ತು, ಈ ಕ್ರಮವನ್ನು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರೋಧಿಸಿದ್ದವು. ಕೇರಳದ ವಿಶ್ವವಿದ್ಯಾಲಯಗಳನ್ನು ಕಮ್ಯುನಿಸ್ಟ್ ಕೇಂದ್ರಗಳಾಗಿ ಪರಿವರ್ತಿಸುವ ಉದ್ದೇಶದಿಂದ ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಅವು ಆರೋಪಿಸಿದ್ದವು.

ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿದ್ದರೆ ಮುಂದಿನ ತಿಂಗಳು ವಿಧಾನಸಭೆ ಅಧಿವೇಶನ ಕರೆದು ಶಾಸನ ರೂಪಿಸುತ್ತೇವೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಗುರುವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT