ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಸಾಜಿ ಚೆರಿಯನ್‌ ಮರುನೇಮಕಕ್ಕೆ ರಾಜ್ಯಪಾಲರ ಅನುಮೋದನೆ

Last Updated 3 ಜನವರಿ 2023, 12:32 IST
ಅಕ್ಷರ ಗಾತ್ರ

ತಿರುವನಂತಪುರ: ಸಿಪಿಐ(ಎಂ) ನಾಯಕ ಸಾಜಿ ಚೆರಿಯನ್ ಅವರನ್ನು ಮತ್ತೆ ಸಚಿವರನ್ನಾಗಿ ನೇಮಿಸುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿಫಾರಸನ್ನು ಅನುಮೋದಿಸಿರುವುದಾಗಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮಂಗಳವಾರ ತಿಳಿಸಿದ್ದಾರೆ.

ಚೆರಿಯನ್ ಅವರ ಪದಗ್ರಹಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ಏನು ಹೇಳಬೇಕೋ ಅದನ್ನು ಹೇಳಲಾಗಿದೆ. ಅಂತಿಮವಾಗಿ, ನಾನು ಸಿಎಂ ಶಿಫಾರಸನ್ನು ಒಪ್ಪಿಕೊಂಡಿದ್ದೇನೆ ಮತ್ತು ಬುಧವಾರ ಸಂಜೆ 4 ಗಂಟೆಗೆ ಪ್ರಮಾಣ ವಚನ ನಡೆಯಲಿದೆ ಎಂದು ಖಾನ್ ಸುದ್ದಿಗಾರರಿಗೆ ತಿಳಿಸಿದರು.

ಸಿಪಿಎಂನ ಈ ನಿರ್ಧಾರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಟೀಕಿಸಿದ್ದವು ಮತ್ತು ಈ ಕ್ರಮವು ಸ್ವೀಕಾರಾರ್ಹವಲ್ಲ ಮತ್ತು ಸಂವಿಧಾನ ವಿರೋಧಿ ಎಂದು ಬಣ್ಣಿಸಿವೆ. ಜನವರಿ 4ನ್ನು ‘ಕಪ್ಪು ದಿನ’ವನ್ನಾಗಿ ಆಚರಿಸುವುದಾಗಿ ಕಾಂಗ್ರೆಸ್ ಹೇಳಿದೆ.

ಹಿನ್ನೆಲೆ: ಪತ್ತನಂತಿಟ್ಟ ಜಿಲ್ಲೆಯಲ್ಲಿ ಭಾಷಣ ಮಾಡುವಾಗ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವ ಮತ್ತು ಆ ಸಂಬಂಧ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ್ದ ಕಾರಣ ಚೆರಿಯನ್ ಅವರು ಕಳೆದ ವರ್ಷ ಜುಲೈನಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT