ಕುಲಾಧಿಪತಿಯಾಗಿ ಶಿಕ್ಷಣ ತಜ್ಞರು: ಕರಡು ಮಸೂದೆಗೆ ಒಪ್ಪಿಗೆ
ತಿರುವನಂತಪುರ (ಪಿಟಿಐ): ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರ ಬದಲು ಉತ್ತಮ ಶಿಕ್ಷಣತಜ್ಞರನ್ನು ಕುಲಾಧಿಪತಿಯನ್ನಾಗಿ ನೇಮಿಸುವ ಮಸೂದೆಯನ್ನು ಡಿ.5ರಿಂದ ಪ್ರಾರಂಭವಾಗಲಿರುವ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಕೇರಳ ಸರ್ಕಾರ ಬುಧವಾರ ನಿರ್ಧಾರಿಸಿದೆ.
ಕುಲಪತಿಗಳ ನೇಮಕ ಕುರಿತು ರಾಜ್ಯದಲ್ಲಾಗುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಮಾಡಿದೆ. ಮುಖ್ಯಮಂತ್ರಿ ಪಿಣರಾಯಿ ರಾಜನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಶಿಕ್ಷಣತಜ್ಞರನ್ನು ನೇಮಿಸುವ ಕರಡು ಮಸೂದೆಗೆ ಒಪ್ಪಿಗೆ ದೊರಕಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.