ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕೊರೊನಾ ಸೋಂಕು ಪ್ರಸರಣ ನಿಯಂತ್ರಣಕ್ಕೆ ಸೆಕ್ಷನ್‌ 144 ಜಾರಿ

Last Updated 2 ಅಕ್ಟೋಬರ್ 2020, 6:22 IST
ಅಕ್ಷರ ಗಾತ್ರ

ತಿರುವನಂತಪುರ:ಕೇರಳ ಸರ್ಕಾರವು ಕೊರೊನಾ ವೈರಸ್‌ ಪ್ರಸರಣವನ್ನು ನಿಯಂತ್ರಿಸಲು ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಗೊಳಿಸಿದ್ದು, ಐದಕ್ಕೂ ಹೆಚ್ಚು ಜನರು ಸೇರದಂತೆ ನಿರ್ಬಂಧ ವಿಧಿಸಿದೆ.

ಈ ಬಗ್ಗೆ ಮುಖ್ಯ ಕಾಯದರ್ಶಿ ವಿಶ್ವಾಸ್‌ ಮೆಹ್ತಾ ಅವರುಗುರುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.

ಜನರು ಗುಂಪು ಸೇರುವುದರಿಂದ ಕೊರೊನಾ ಸೋಂಕು‌ ಹರಡುವ ಅಪಾಯ ಹೆಚ್ಚಿರುತ್ತದೆ. ಹಾಗಾಗಿ ಅ.3 ರಂದು ಬೆಳಿಗ್ಗೆ 9 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದ್ದು, ಅ.31 ತನಕ ಜಾರಿಯಲಿರುತ್ತದೆ.ರಾಜ್ಯದಲ್ಲಿ ಜನರು ಸಭೆ ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಆಯಾ ಜಿಲ್ಲೆಗಳಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದ್ದು, ಜಿಲ್ಲೆಗಳ ಪರಿಸ್ಥಿತಿಯ ಪರಿಶೀಲನೆ ಮಾಡಬೇಕು. ಅಲ್ಲದೆ ಸೆಕ್ಷನ್‌ 144 ರಡಿ ಕೊರೊನಾ ಸೋಂಕು ಪ್ರಸರಣ ನಿಯಂತ್ರಿಸುವ ಕ್ರಮಗಳನ್ನು ಅವರು ತೆಗೆದುಕೊಳ್ಳಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು2 ಲಕ್ಷ ದಾಟಿದ್ದು, ಗುರುವಾರ8,135 ಹೊಸ ಪ್ರಕರಣಗಳು ವರದಿಯಾಗಿದೆ. ಈವರೆಗೆಕೋವಿಡ್‌ಗೆ 771 ಮಂದಿ ಮೃತಪಟ್ಟಿದ್ದಾರೆ.

ಕೇರಳದಲ್ಲಿಕಳೆದ ವಾರಗಳಿಂದ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಸೆ.11 ತನಕ ಪ್ರಕರಣಗಳು ಒಂದು ಲಕ್ಷ ದಾಟಿದ್ದವು. ಇಲ್ಲಿ72,339 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 2.43 ಲಕ್ಷ ಕ್ಕೂ ಹೆಚ್ಚು ಜನರ ಮೇಲೆ ನಿಗಾ ಇಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT