ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಫಾ ತಡೆಗೆ ಮಾರ್ಗಸೂಚಿ ಪ್ರಕಟ

Last Updated 6 ಸೆಪ್ಟೆಂಬರ್ 2021, 19:56 IST
ಅಕ್ಷರ ಗಾತ್ರ

ತಿರುವನಂತಪುರ:ನಿಫಾ ವೈರಸ್‌ ಹರಡುವಿಕೆ ತಡೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕೇರಳ ಸರ್ಕಾರವು ಸೋಮವಾರ ಮಾರ್ಗಸೂಚಿ ಹೊರಡಿಸಿದೆ.ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಈ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಇದರ ಮೇಲ್ವಿಚಾರಣೆಗೆ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ.

‘ನಿಫಾ ವೈರಸ್ ತಡೆಗಟ್ಟಲು ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡುವುದು, ತಪಾಸಣೆ ಮತ್ತು ಚಿಕಿತ್ಸೆಯೇ ಪರಿಣಾಮಕಾರಿ ವಿಧಾನ. ಇದಕ್ಕಾಗಿ ರಾಜ್ಯ ಮಟ್ಟದ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅಗತ್ಯಕ್ಕೆ ತಕ್ಕಂತೆ ಮತ್ತಷ್ಟು ಮಾರ್ಗಸೂಚಿಗಳನ್ನು ಸೇರಿಸಿಕೊಳ್ಳಬಹುದು’ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

‘ಸೋಂಕಿತರ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಚಿಕಿತ್ಸಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಪಾಲಿಸಲಾಗುತ್ತದೆ. ಆಸ್ಪತ್ರೆಯ ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ಸಿಬ್ಬಂದಿಯೂ ಪಿಪಿಇ ಕಿಟ್ ಧರಿಸಲು ಸೂಚನೆ ನೀಡಲಾಗಿದೆ. ಈ ಎಲ್ಲಾ ಸಿಬ್ಬಂದಿಗೆ ನಿಫಾ ಹರಡುವುದನ್ನು ತಡೆಗಟ್ಟಲು ವಿಶೇಷ ತರಬೇತಿ ನೀಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

‘ಕೋಯಿಕ್ಕೋಡ್‌ನಲ್ಲಿ ನಿಫಾದಿಂದ ಮೃತಪಟ್ಟ ಬಾಲಕನ ಸಂಪರ್ಕಕ್ಕೆ ಬಂದಿರುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬಾಲಕನನ್ನು ಮೊದಲು ಒಂದು ಕ್ಲಿನಿಕ್‌ಗೆ, ಆನಂತರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಕೋಯಿಕ್ಕೋಡ್‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಎಲ್ಲಾ ಆಸ್ಪತ್ರೆಯಲ್ಲಿ ಬಾಲಕನ ಸಂಪರ್ಕಕ್ಕೆ ಬಂದಿದ್ದ ಜನರನ್ನು ಪತ್ತೆ ಮಾಡಬೇಕಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಈವರೆಗೆ ಪತ್ತೆಯಾಗಿರುವ 188 ಪ್ರಾಥಮಿಕ ಸಂಪರ್ಕಿತರಲ್ಲಿ 11 ಜನರ ಮಾದರಿಗಳನ್ನು ಪುಣೆಯ ವೈರಾಣುಶಾಸ್ತ್ರ ಸಂಸ್ಥೆಗೆ ಕಳುಹಿಸಲಾಗಿದೆ. 11 ಜನರಲ್ಲೂ ನಿಫಾ ಲಕ್ಷಣಗಳು ಕಂಡುಬಂದಿದೆ. ಅವರ ಪ್ರಾಥಮಿಕ ಸಂಪರ್ಕಿತರನ್ನೂ ಪತ್ತೆ ಮಾಡಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT