ಸೋಮವಾರ, ಡಿಸೆಂಬರ್ 5, 2022
21 °C

ಕೇರಳ: ಪಿಎಸ್‌ಯು ನೌಕರರ ನಿವೃತ್ತಿ ವಯಸ್ಸು ಹೆಚ್ಚಳ ನಿರ್ಧಾರ ಹಿಂದಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ರಾಜ್ಯದ ಸಾರ್ವಜನಿಕ ಉದ್ದಿಮೆಗಳ (ಪಿಎಸ್‌ಯು) ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಗಳಿಗೆ ಹೆಚ್ಚಿಸುವ ತನ್ನ ನಿರ್ಧಾರವನ್ನು ಕೇರಳ ಸರ್ಕಾರ ಬುಧವಾರ ಹಿಂಪಡೆದಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿ.ಎಂ ಕಚೇರಿ ಹೇಳಿಕೆ ತಿಳಿಸಿದೆ.

ಸಾರ್ವಜನಿಕ ವಲಯದಲ್ಲಿ ವೃತ್ತಿಜೀವನದ ಕನಸು ಕಾಣುತ್ತಿರುವ ರಾಜ್ಯದ ಯುವಕರಿಗೆ ಎಲ್‌ಡಿಎಫ್ ಸರ್ಕಾರದ ನಿರ್ಧಾರ ದ್ರೋಹ ಬಗೆದಂತೆ ಎಂದು ಆರೋಪಿಸಿ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆ ವ್ಯಕ್ತಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಬಹುತೇಕ ಪಿಎಸ್‌ಯುಗಳ ನೌಕರರ ನಿವೃತ್ತಿ ವಯಸ್ಸನ್ನು ಸರ್ಕಾರ ಏಕರೂಪವಾಗಿ 60ಕ್ಕೆ ಹೆಚ್ಚಿಸಿತ್ತು, ಇದು ಎಡಪಂಥೀಯ ಯುವ ಸಂಘಟನೆಯಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.

ಕೇರಳ ರಾಜ್ಯ ವಿದ್ಯುತ್ ಮಂಡಳಿ, ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು  ಜಲ ಪ್ರಾಧಿಕಾರ ಹೊರತುಪಡಿಸಿ ರಾಜ್ಯದ ಪಿಎಸ್‌ಯುಗಳ  ವೇತನ, ವೇತನ ರಚನೆಗೆ ಸಾಮಾನ್ಯ ಚೌಕಟ್ಟು ರೂಪಿಸುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿದ ತಜ್ಞರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಶನಿವಾರ ಈ ಆದೇಶವನ್ನು ಹೊರಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು