ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಸಾಮಾಜಿಕ–ಆರ್ಥಿಕ ಸಮೀಕ್ಷೆಗೆ ತೀರ್ಮಾನ

Last Updated 29 ಸೆಪ್ಟೆಂಬರ್ 2021, 9:47 IST
ಅಕ್ಷರ ಗಾತ್ರ

ತಿರುವನಂತಪುರ: ರಾಜ್ಯದ ಮುಂದುವರಿದ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಲು ಕೇರಳ ಸರ್ಕಾರವು ಶೀಘ್ರದಲ್ಲಿಯೇ ಸಾಮಾಜಿಕ–ಆರ್ಥಿಕ ಸಮೀಕ್ಷೆ ನಡೆಸಲಿದೆ. ಇದು ಆ ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೇರಳ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಮಹಿಳೆಯರ ಬಡತನ ನಿರ್ಮೂಲನೆ ಯೋಜನೆಯಾದ ಕುಟುಂಬಶ್ರೀ ಮೂಲಕ ಮುಂದುವರಿದ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರ ಸಮೀಕ್ಷೆ ನಡೆಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸಮೀಕ್ಷೆಯ ಭಾಗವಾಗಿ ರಾಜ್ಯದಾದ್ಯಂತ ಗ್ರಾಮ, ಪುರಸಭೆ ಮತ್ತು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿ ವಾರ್ಡ್‌ನಲ್ಲಿ ಮುಂದುವರಿದ ಸಮುದಾಯಗಳಿಗೆ ಸೇರಿದ ಆರ್ಥಿಕವಾಗಿ ಅತಿ ಹಿಂದುಳಿದ ಐದು ಕುಟುಂಬಗಳನ್ನು ಗುರುತಿಸಲಾಗುತ್ತದೆ.

ಸಮೀಕ್ಷೆಗಾಗಿ ಒಟ್ಟು ₹75.67 ಲಕ್ಷ ಮಂಜೂರು ಮಾಡಲು ಅನುಮತಿ ನೀಡಲಾಗಿದೆ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT