ಬುಧವಾರ, ಡಿಸೆಂಬರ್ 7, 2022
23 °C

ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿದ್ದರೆ ಶಾಸನ : ಕೇರಳ ಸಚಿವೆ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆರವುಗೊಳಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿದ್ದರೆ ಮುಂದಿನ ತಿಂಗಳು ವಿಧಾನಸಭೆ ಅಧಿವೇಶನ ಕರೆದು ಶಾಸನ ರೂಪಿಸುತ್ತೇವೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಗುರುವಾರ ತಿಳಿಸಿದ್ದಾರೆ.

ಈ ವಿವಾದಿತ ಸುಗ್ರೀವಾಜ್ಞೆಯನ್ನು ರಾಷ್ಟ್ರಪತಿಗೆ ಶಿಫಾರಸು ಮಾಡಲು ರಾಜ್ಯಪಾಲರು ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ, ‘ಆ ರೀತಿ ಮಾಡಲು ಅವರಿಗೆ ಹಕ್ಕಿದೆ’ ಎಂದಿದ್ದಾರೆ.

‘ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ರಾಷ್ಟ್ರಪತಿಗೆ ಕಳುಹಿಸಲಿ ಅದರಲ್ಲೇನಿದೆ. ನಾವು ಅದರಲ್ಲಿ ಏನಾದರೂ ಆಕ್ಷೇಪಾರ್ಹ ಅಂಶಗಳನ್ನು ಸೇರಿಸಿದ್ದೇವೆಯೇ’ ಎಂದು ಸಚಿವೆ ಪ್ರಶ್ನಿಸಿದ್ದಾರೆ.

ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆರವುಗೊಳಿಸುವ ಸುಗ್ರೀವಾಜ್ಞೆ ಹೊರಡಿಸಲು ಎಲ್‌ಡಿಎಫ್‌ ಸರ್ಕಾರ ಬುಧವಾರ ತೀರ್ಮಾನಿಸಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು