ಶುಕ್ರವಾರ, ಸೆಪ್ಟೆಂಬರ್ 24, 2021
27 °C

ತಂದೆಯೊಂದಿಗೆ ಶಬರಿಮಲೆ ದರ್ಶನಕ್ಕೆ ತೆರಳಲು ಬಾಲಕಿಗೆ ಹೈಕೋರ್ಟ್‌ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ತನ್ನ ತಂದೆಯೊಂದಿಗೆ ಶಬರಿಮಲೆ ದೇಗುಲ ದರ್ಶನಕ್ಕೆ ತೆರಳಲು ಬಾಲಕಿಯೊಬ್ಬಳಿಗೆ ಕೇರಳ ಹೈಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಇಂಥದ್ದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ಆದೇಶ ಮತ್ತು ‘ಕೋವಿಡ್‌ ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳ ಜೊತೆಯಲ್ಲಿ ಮಕ್ಕಳು ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸಬಹುದು‘ ಎಂಬ ರಾಜ್ಯ ಸರ್ಕಾರ ಆಗಸ್ಟ್‌ 4 ರಂದು ಹೊರಡಿಸಿರುವ ಆದೇಶವನ್ನು ಆಧರಿಸಿ ನ್ಯಾಯಾಲಯ ಈ ಅನುಮತಿ ನೀಡಿದೆ.

ಒಂಬತ್ತು ವರ್ಷದ ಬಾಲಕಿಯು ಆಗಸ್ಟ್ 23 ರಂದು ತನ್ನ ತಂದೆಯೊಂದಿಗೆ ಶಬರಿಮಲೆಗೆ ತೆರಳಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಳು. ಆಕೆಯ ಮನವಿಯನ್ನು ಪರಿಶೀಲಿಸಿದ ನ್ಯಾಯಾಲಯ ಈ ರೀತಿ ಆದೇಶ ನೀಡಿದೆ.

ಬಾಲಕಿಯ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ, ‘ಆಕೆ ಹತ್ತು ವರ್ಷ ತುಂಬುವ ಮೊದಲೇ ಶಬರಿಮಲೆಗೆ ಹೋಗಲು ಬಯಸಿದ್ದಾಳೆ, ಮುಂದೆ ನಾಲ್ಕು ದಶಕಗಳ ಕಾಲ ಶ್ರೀಕ್ಷೇತ್ರಕ್ಕೆ ಭೇಟಿ ನೀಡಲು ಆಕೆಗೆ ಸಾಧ್ಯವಾಗದಿರಬಹುದು‘ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ‘ಅರ್ಜಿದಾರರ ಅಭಿಪ್ರಾಯವನ್ನು ಪರಿಗಣಿಸಿ, ಆಗಸ್ಟ್‌ 23ರಂದು  ತನ್ನ ತಂದೆಯೊಂದಿಗೆ ಶಬರಿಮಲೆಗೆ ತೆರಳಲು ಬಾಲಕಿಗೆ ಅನುಮತಿ ನೀಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು