ಬುಧವಾರ, ಆಗಸ್ಟ್ 17, 2022
23 °C

ಲಕ್ಷದ್ವೀಪ ಆಡಳಿತದ ಸುಧಾರಣಾ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

ಕೋರ್ಟ್‌– ಪ್ರಾತಿನಿಧಿಕ ಚಿತ್ರ

ಕೊಚ್ಚಿ: ಲಕ್ಷದ್ವೀಪ ಅಭಿವೃದ್ಧಿ ನಿಯಂತ್ರಣ ಪ್ರಾಧಿಕಾರ –2021(ಎಲ್‌ಡಿಎಆರ್‌), ಸಮಾಜ ವಿರೋಧಿ ಚಟುವಟಿಕೆ ತಡೆ ಕಾಯ್ದೆ (ಪಿಎಎಸ್ಎ) ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಯನ್ನು ಕೇರಳ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.

ಈ ಸುಧಾರಣಾ ಕ್ರಮಗಳು ಕರಡು ರಚನೆ ಹಂತದಲ್ಲಿವೆ ಎಂಬುದನ್ನು ಗಮನಿಸಿದ ನ್ಯಾಯಾಲಯವು ಪಿಐಎಲ್‌ ಅನ್ನು ವಜಾಗೊಳಿಸಿದೆ. ಕಾಂಗ್ರೆಸ್‌ ನಾಯಕ ಕೆ.ಪಿ ನೌಶಾದ್‌ ಆಲಿ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ನ್ಯಾಯಾಲಯವು ಅರ್ಜಿ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಈ ಪಿಎಎಸ್ಎ ಕಾಯ್ದೆಯು ಒಬ್ಬ ವ್ಯಕ್ತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೇ ಒಂದು ವರ್ಷದವರೆಗೆ ಬಂಧನದಲ್ಲಿಡುವ ಅಧಿಕಾರವನ್ನು ನೀಡುತ್ತದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು