ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷಭಾಷಣ: ಪಿ.ಸಿ.ಜಾರ್ಜ್‌ಗೆ ಜಾಮೀನು

Last Updated 27 ಮೇ 2022, 12:18 IST
ಅಕ್ಷರ ಗಾತ್ರ

ಕೊಚ್ಚಿ: ದ್ವೇಷ ಭಾಷಣದ ಆರೋಪ‍ ಸಂಬಂಧ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್‌ ಅವರಿಗೆ ಕೇರಳ ಹೈಕೋರ್ಟ್‌ ಜಾಮೀನು ನೀಡಿದೆ.

ತಿರುವನಂತಪುರದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಜಾರ್ಜ್‌ ಅವರಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಬಳಿಕ ಬುಧವಾರ ಅವರನ್ನು ಮತ್ತೆ ಬಂಧಿಸಲಾಗಿತ್ತು.

ಏಪ್ರಿಲ್‌ 29 ರಂದು ನಡೆದ ಅನಂತಪುರಿ ಹಿಂದೂ ಮಹಾಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರನ್ನು ಮೇ 1 ರಂದು ಬಂಧಿಸಲಾಗಿತ್ತು. ಅದೇ ದಿನ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

70 ವರ್ಷದ ಮಾಜಿ ಶಾಸಕರಾದ ಜಾರ್ಜ್‌ ಮುಸ್ಲಿಮರು ನಡೆಸುವ ರೆಸ್ಟೋರೆಂಟ್‌ಗಳಲ್ಲಿ ಮುಸ್ಲಿಮೇತರರು ಊಟ ಮಾಡಬೇಡಿ ಎಂದು ಕರೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಮೇ 10 ರಂದು ಎರ್ನಾಕುಲಂ ಜಿಲ್ಲೆ ಪಲರಿವಟ್ಟಂ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದ್ವೇಷ ಭಾಷಣ ಆರೋಪದ ಪ್ರಕರಣ ದಾಖಲಾಗಿತ್ತು.

ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡಿದಕ್ಕಾಗಿ ಮೇ 25 ರಂದು ಜಾರ್ಜ್‌ ಅವರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT