ಬುಧವಾರ, ಡಿಸೆಂಬರ್ 8, 2021
18 °C

ಆನ್‌ಲೈನ್ ರಮ್ಮಿ ನಿಷೇಧ: ಸರ್ಕಾರದ ಆದೇಶ ರದ್ದುಪಡಿಸಿದ ಕೇರಳ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಆನ್‌ಲೈನ್ ರಮ್ಮಿಯನ್ನು ನಿಷೇಧಿಸುವ ಕೇರಳ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದ್ದು, ಸರ್ಕಾರ ಹೇಳುವಂತೆ ಇದು ಜೂಜಾಟಕ್ಕೆ ಸಮನಾದುದು ಅಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿ ಟಿ.ಆರ್. ರವಿ ಅವರು ಕೇರಳ ಸರ್ಕಾರದ ನಿರ್ಧಾರ ರದ್ದುಪಡಿಸಿದರು ಹಾಗೂ ಸರ್ಕಾರದ ಆದೇಶ ಅಸಾಂವಿಧಾನಿಕ ಎಂದು ಅಭಿಪ್ರಾಯಪಟ್ಟರು.

ಆನ್‌ಲೈನ್ ರಮ್ಮಿಯನ್ನು ನಿಷೇಧಿಸುವ ರಾಜ್ಯ ಸರ್ಕಾರದ ಅಧಿಸೂಚನೆಯ ವಿರುದ್ಧ ಹಲವು ಆನ್‌ಲೈನ್ ಗೇಮಿಂಗ್ ಕಂಪನಿಗಳು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಈ ತೀರ್ಪು ನೀಡಿದ್ದಾರೆ.

ಆನ್‌ಲೈನ್ ರಮ್ಮಿ ಜೂಜಾಟಕ್ಕೆ ಸಮ. ಹೀಗಾಗಿ ಈ ಆಟವನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಭೌತಿಕ ಸ್ವರೂಪದ ಕಾರ್ಡ್ ಆಟಕ್ಕೆ ಅನುಮತಿ ನೀಡಿರುವಾಗ ಆನ್‌ಲೈನ್ ರಮ್ಮಿ ಆಟ ಆಡುವುದನ್ನು ನಿಷೇಧಿಸುವುದು ಸರಿಯಲ್ಲ ಎಂದು ಗೇಮಿಂಗ್ ಕಂಪನಿಗಳು ವಾದಿಸಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು