ಕೊಚ್ಚಿ: ಎನ್ಐಎ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕರೆ ನೀಡಿರುವ ಹರತಾಳ ಮತ್ತು ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕೇರಳದಲ್ಲಿ ಹರತಾಳಕ್ಕೆ ನಿಷೇಧ ಹೇರಲಾಗಿದೆ. ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಹಿಂಸಾಚಾರ ತಡೆಗೆ ಅಗತ್ಯವಾದ ಎಲ್ಲ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕಟ್ಟಪ್ಪಣೆ ಮಾಡಿದೆ.

ಬಂದ್ ವೇಳೆ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ಬಸ್ ಧ್ವಂಸ ಮುಂತಾದ ಹಿಂಸಾಚಾರದ ಘಟನೆಗಳು ವರದಿಯಾಗಿವೆ.

ಆಟೋ ಚಾಲಕ, ಬಸ್ ಚಾಲಕ, ಸಾರ್ವಜನಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಕೇರಳ: ಹಿಂಸಾರೂಪಕ್ಕೆ ತಿರುಗಿದ ಪಿಎಫ್ಐ ಬಂದ್– ಕೆಎಸ್ಆರ್ಟಿಸಿ ಬಸ್ ಧ್ವಂಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.