ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಶುಕ್ರವಾರ ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ.
2018ರಲ್ಲಿ ಸಿಎಂಡಿಆರ್‌ಎಫ್(ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿ)ನಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಡಿ ಪಿಣರಾಯಿ ವಿಜಯನ್ ವಿರುದ್ಧ, ಸಾಮಾಜಿಕ ಕಾರ್ಯಕರ್ತ ಆರ್.ಎಸ್. ಶಶಿಕುಮಾರ್ ಪ್ರಕರಣ ದಾಖಲಿಸಿದ್ದರು.
ಕಳೆದ ವಾರ ಅರ್ಜಿದಾರ ಕೇರಳ ಹೈಕೋರ್ಟ್‌ಗೆ ಮೊರೆ ಹೋದ ನಂತರವೇ ಈ ಪ್ರಕರಣದ ತೀರ್ಪಿನ ಪ್ರಕ್ರಿಯೆ ಚುರುಕುಗೊಂಡಿದೆ.
ಸಿಪಿಐ(ಎಂ) ಮೃತ ಶಾಸಕರ ಕುಟುಂಬ, ಉನ್ನತ ರಾಜಕೀಯ ನಾಯಕರು ಸೇರಿದಂತೆ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಮೃತಟ್ಟಿದ್ದರು. ಇವರ ಕುಟುಂಬಕ್ಕೆ ಪರಿಹಾರ ನೀಡದೆ, ಪರಿಹಾರ ನೀಡಲಾಗಿದೆ ಎಂದು ಹೇಳಲಾಗಿತ್ತು. ಈ ಮೂಲಕ ಸಿಎಂಡಿಆರ್‌ಎಫ್‌ನಲ್ಲಿ ಹಣ ದುರುಪಯೋಗ ಮಾಡಲಾಗಿದೆ ಎಂದು ಅರ್ಜಿದಾರ ದೂರಿನಲ್ಲಿ ತಿಳಿಸಿದ್ದಾರೆ.
ಲೋಕಾಯುಕ್ತದ ಉಭಯ ನ್ಯಾಯಮೂರ್ತಿಗಳ ಪೀಠ ಶುಕ್ರವಾರ ತೀರ್ಪು ನೀಡುವ ನೀರಿಕ್ಷೆ ಇದೆ.
ಸೆಪ್ಟೆಂಬರ್ 2018 ರಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂಬಂಧ ವಿಚಾರಣೆಯು ಮಾರ್ಚ್ 18, 2022 ರಂದು ಕೊನೆಗೊಂಡಿತ್ತು. ಅಂದಿನಿಂದ ತೀರ್ಪನ್ನು ಬಾಕಿ ಇರಿಸಲಾಗಿದೆ.
ಈ ಹಿಂದಿನ ವಿಜಯನ್ ಸರ್ಕಾರದ ಅವಧಿಯಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಕೆ.ಟಿ. ಜಲೀಲ್, ಅಧಿಕಾರ ದುರ್ಬಳಕೆ ಪ್ರಕರಣದಲ್ಲಿ ಲೋಕಾಯುಕ್ತ ತೀರ್ಪಿನ ಬಳಿಕ ರಾಜೀನಾಮೆ ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.