ಶುಕ್ರವಾರ, ಮಾರ್ಚ್ 31, 2023
33 °C

ಭಾರಿ ಮಳೆ ಮನ್ಸೂಚನೆ: ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರಂ: ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಜುಲೈ 11 ರಂದು ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ ಈ ಎರಡೂ ಜಿಲ್ಲೆಗಳಲ್ಲಿ ಶನಿವಾರ ರೆಡ್‌ ಅಲರ್ಟ್‌ ಘೋಷಿಸಿದೆ.

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕೇರಳದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ, ವಯನಾಡ್, ಕೋಯಿಕ್ಕೋಡ್ ಮತ್ತು ಮಲ್ಲಪ್ಪುರಂ ಜಿಲ್ಲೆಗಳಲ್ಲಿ ಭಾನುವಾರ ಆರೆಂಜ್ ಅಲರ್ಟ್‌ ಘೋಷಿಸಿದೆ. ಹಾಗೆಯೇ, ಪಾಲಕ್ಕಾಡ್, ತ್ರಿಶ್ಯೂರ್, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಮುಂದಿನ ಮೂರ್ನಾಲ್ಕು ದಿನಗಳವರೆಗೆ (ಜುಲೈ 10 ರಿಂದ 13ರವರೆಗೆ) ಕೇರಳದ ಕರಾವಳಿ ತೀರದ ಉದ್ದಕ್ಕೂ 40 ರಿಂದ 50 ಕಿ.ಮೀ ವೇಗದಲ್ಲಿ ಭಾರಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ‘ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು