ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಪಾಲಕ್ಕಾಡ್‌ನ ಕೋಳಿ ಆಹಾರ ಘಟಕದಲ್ಲಿ ತೈಲ ಸೋರಿಕೆ, ಸ್ಫೋಟ: 20 ಮಂದಿಗೆ ಗಾಯ

Last Updated 30 ಜುಲೈ 2021, 1:49 IST
ಅಕ್ಷರ ಗಾತ್ರ

ಪಾಲಕ್ಕಾಡ್‌: ಕೇರಳದ ಪಾಲಕ್ಕಾಡ್‌ ಜಿಲ್ಲೆಯ ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾದ ಪರಿಣಾಮ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ.

ಪಾಲಕ್ಕಾಡ್‌ನ ತಿರುವಿಳಕುನ್ನು ಎಂಬಲ್ಲಿ ಗುರುವಾರ ಸಂಜೆ ಸುಮಾರು 5 ಗಂಟೆಗೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯೂ ಸೇರಿದಂತೆ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಘಟಕವು ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾಗ ತೈಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಅವರು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯ ಕೋರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸುತ್ತಿರುವ ನಡುವೆಯೇ ತೈಲ ಟ್ಯಾಂಕ್‌ನಲ್ಲಿ ಬಿಸಿ ಹೆಚ್ಚಳವಾಗಿ ಸ್ಫೋಟ ಸಂಭವಿಸಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT