ಶುಕ್ರವಾರ, ಜೂನ್ 18, 2021
29 °C

ಇಡುಕ್ಕಿ | ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 48ಕ್ಕೆ ಏರಿಕೆ; ಮುಂದುವರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Rescue workers look for survivors at the site of a landslide during heavy rains in Idukki

ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲ ಎಂಬಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 48ಕ್ಕೇರಿದೆ. ಸೋಮವಾರ 5 ಮೃತದೇಹಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ ಎಂದು ಕೇರಳ ಸರ್ಕಾರ  ಹೇಳಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಜತೆಗೆ ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ  ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗಿದೆ.

ಮುಂದುವರಿದ ಮಳೆ
ಕೇರಳದಲ್ಲಿ ಮಳೆ ಮುಂದುವರಿದಿದ್ದು ಆಲಪ್ಪುಳದ ಕುಟ್ಟನಾಡ್ ತಾಲ್ಲೂಕಿನಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಜಿಲ್ಲಾಡಳಿತವು 30 ನಿರಾಶ್ರಿತರ ಶಿಬಿರಗಳನ್ನು ಸಿದ್ಧಗೊಳಿಸಿದ್ದು, ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರನ್ನು ಲಾರಿ ಮತ್ತು ಟ್ರ್ಯಾಕ್ಟರ್ ಮೂಲಕ ಸುರಕ್ಷಿತ ಸ್ಥಳಗಳಿಗೆ ತಲುಪಿಸಲಾಗಿದೆ . 

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಸೋಮವಾರ 20 ಸೆಮಿ ಮಳೆಯಾಗುವ ಸಾಧ್ಯತೆ ಇದ್ದು ಮಂಗಳವಾರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಕಾಸರಗೋಡು, ಕಣ್ಣೂರ್, ವಯನಾಡ್, ಕೋಯಿಕ್ಕೋಡ್, ಮಲಪ್ಪುರಂ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಭಾರೀ  ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು