ಕೇರಳದಲ್ಲಿ 44 ಓಮೈಕ್ರಾನ್ ಪ್ರಕರಣ ದೃಢ, ಸೋಂಕಿತರ ಸಂಖ್ಯೆ 107 ಕ್ಕೆ ಏರಿಕೆ

ತಿರುವನಂತಪುರ: ಕೇರಳದಲ್ಲಿ ಕೊರೊನಾ ವೈರಸ್ನ ರೂಪಾಂತರ ತಳಿ ‘ಓಮೈಕ್ರಾನ್’ ದೃಢಪಟ್ಟ 44 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಓಮೈಕ್ರಾನ್ ದೃಢಪಟ್ಟ ಪ್ರಕರಣಗಳ ಸಂಖ್ಯೆ 107 ಕ್ಕೆ ಏರಿಕೆಯಾಗಿದೆ.
Kerala records 44 fresh confirmed cases of #Omicron, taking total cases of the coronavirus variant to 107 in the state: Kerala Health Minister Veena George
(File photo) pic.twitter.com/RokfkgIiOf
— ANI (@ANI) December 31, 2021
ಕೇರಳದಲ್ಲಿ ಗುರುವಾರ 2,423 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದರು. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಸದ್ಯ ಕೇರಳದಲ್ಲಿ 19,835 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಶುಕ್ರವಾರ ಒಂದೇ ದಿನ 309 ಹೊಸ ಓಮೈಕ್ರಾನ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,270 ಕ್ಕೆ ಹೆಚ್ಚಳವಾಗಿದೆ. ಜತೆಗೆ, 24 ಗಂಟೆಗಳ ಅವಧಿಯಲ್ಲಿ 16,764 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 220 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 91,361 ಸಕ್ರಿಯ ಪ್ರಕರಣಗಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.