ಶನಿವಾರ, ಸೆಪ್ಟೆಂಬರ್ 18, 2021
22 °C

ಕೋವಿಡ್–19 ನಿರ್ಬಂಧ ಸಡಿಲಿಸಿದ ಕೇರಳ ಸರ್ಕಾರ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೋವಿಡ್–19 ನಿರ್ಬಂಧಗಳನ್ನು ಸಡಿಲಿಸಲು ಕೇರಳ ಸರ್ಕಾರ ಮುಂದಾಗಿದ್ದು, ಶನಿವಾರದ ಸಂಪೂರ್ಣ ಲಾಕ್‌ಡೌನ್ ಅನ್ನು ತೆರವುಗೊಳಿಸಿದೆ.

ಶನಿವಾರಗಳಂದು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9ರ ವರೆಗೆ ಕಾರ್ಯಾಚರಿಸಲು ಅಂಗಡಿಗಳಿಗೆ ಅನುಮತಿ ನೀಡಲಾಗಿದೆ.

ಈವರೆಗೆ ಕೇರಳದಲ್ಲಿ ವಾರಾಂತ್ಯ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿತ್ತು. ಇದೀಗ ಶನಿವಾರದ ನಿರ್ಬಂಧ ಸಡಿಲಿಸಿರುವುರಿಂದ ಭಾನುವಾರ ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಆದಾಗ್ಯೂ ಆಗಸ್ಟ್ 15 ಮತ್ತು 22ರಂದು ಸ್ವಾತಂತ್ರ್ಯೋತ್ಸವ ಹಾಗೂ ಓಣಂ ಹಬ್ಬದ ಕಾರಣ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಓದಿ: 

ಈ ಕುರಿತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ವಿಧಾನಸಭೆಯಲ್ಲಿ ಬುಧವಾರ ಘೋಷಣೆ ಮಾಡಿದ್ದಾರೆ. ರಾಜ್ಯದ ಹೆಚ್ಚಿನ ಜನರಿಗೆ ಆದಷ್ಟು ಬೇಗ ಲಸಿಕೆ ನೀಡಲು ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದೂ ಅವರು ಹೇಳಿದ್ದಾರೆ.

ಈವರೆಗೆ ರಾಜ್ಯದ ಶೇ 42ರಷ್ಟು ಮಂದಿ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಶೇ 17.6ರಷ್ಟು ಮಂದಿ ಎರಡನೇ ಡೋಸ್‌ ಕೂಡ ಪಡೆದಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸುತ್ತಿರುವ ಕಾರಣ ಪಾಸಿಟಿವಿಟಿ ದರ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಮಂಗಳವಾರ 23,676 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 148 ಸಾವು ಸಂಭವಿಸಿತ್ತು. ದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ ಹೊಸದಾಗಿ ವರದಿಯಾಗುತ್ತಿರುವ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕಿಂತಲೂ ಹೆಚ್ಚು ಕೇರಳದಲ್ಲಿ ಪತ್ತೆಯಾಗುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು