ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಮಂಕಿಪಾಕ್ಸ್ ಐದನೇ ಪ್ರಕರಣ ದೃಢ: ದೇಶದಲ್ಲಿ ಸೋಂಕಿತರ ಸಂಖ್ಯೆ ಏಳಕ್ಕೆ

Last Updated 2 ಆಗಸ್ಟ್ 2022, 8:18 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಮಂಗಳವಾರ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಐದನೇ ಪ್ರಕರಣ ವರದಿಯಾದಂತಾಗಿದೆ.

30 ವರ್ಷ ವಯಸ್ಸಿನ ಸೋಂಕಿತ ವ್ಯಕ್ತಿ ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಜುಲೈ 27ರಂದು ಯುಎಇಯಿಂದ ಕೋಜಿಕ್ಕೋಡ್ ವಿಮಾನ ನಿಲ್ದಾಣದ ಮೂಲಕ ಬಂದಿದ್ದರು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ದೇಶದಾದ್ಯಂತ ಈವರೆಗೆ ಒಟ್ಟು 7 ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿವೆ.

ಜುಲೈ 30ರಂದು ಮೃತಪಟ್ಟ ಕೇರಳದ 20 ವರ್ಷದ ಯುವಕನಿಗೆ ಮಂಕಿ ಪಾಕ್ಸ್ ಸೋಂಕು ತಗುಲಿರುವುದು ಮಾದರಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಮೂಲಗಳು ಸೋಮವಾರ ಹೇಳಿದ್ದವು. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ವೀಣಾ ಜಾರ್ಜ್ ಹೇಳಿದ್ದರು. ಈ ಮಧ್ಯೆ, ದೆಹಲಿಯಲ್ಲಿ ನೆಲೆಸಿರುವ ನೈಜಿರಿಯಾದ ಪ್ರಜೆಗೆ ಮಂಕಿಪಾಕ್ಸ್‌ ಸೋಂಕು ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು.

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಹರಡುವಿಕೆ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ಮತ್ತು ರೋಗ ಹರಡುವಿಕೆ ನಿಭಾಯಿಸಲು ಕೇಂದ್ರ ಸರ್ಕಾರ ಕಾರ್ಯಪಡೆ ರಚಿಸಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT