ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: ಕಲುಷಿತ ಆಹಾರ ಸೇವಿಸಿ ಓರ್ವ ಬಾಲಕಿ ಸಾವು; 18 ಮಂದಿ ಅಸ್ವಸ್ಥ

ಅಕ್ಷರ ಗಾತ್ರ

ತಿರುವನಂತಪುರಂ: ಕೇರಳದ ಕಾಸರಗೋಡಿನಲ್ಲಿ ಕಲುಷಿತಆಹಾರ ಸೇವಿಸಿ 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿದ್ದಾರೆ.

ಸುದ್ದಿಮೂಲಗಳ ಪ್ರಕಾರ, ಇಲ್ಲಿನ ರೆಸ್ಟೋರೆಂಟ್‌ನಲ್ಲಿ ಅರೇಬಿಕ್ ಆಹಾರವಾದ ಷಾವರ್ಮಾವನ್ನು ಸೇವಿಸಿದ ಕಾರಣ ಬಾಲಕಿಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದೇ ರೆಸ್ಟೋರೆಂಟ್‌ನಲ್ಲಿ ಆಹಾರ ಸೇವಿಸಿದ್ದ 18 ಜನರು ಅಸ್ವಸ್ಥರಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವನಂದನಾ ಎಂಬ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಎಲ್ಲರ ಸ್ಥಿತಿ ಸ್ಥಿರವಾಗಿದೆ. ಆದರೆ, ತಡವಾಗಿ ಆಸ್ಪತ್ರೆಗೆ ಕರೆತಂದಿದ್ದರಿಂದ ಬಾಲಕಿಯನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಎ.ವಿ. ರಾಮದಾಸ್ ತಿಳಿಸಿದ್ದಾರೆ.

ಘಟನೆ ನಡೆದ ಬಳಿಕ ರೆಸ್ಟೋರೆಂಟ್‌ ಅನ್ನು ಮುಚ್ಚಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT