ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರ ಕಟೌಟ್‌ಗೆ ಕಪ್ಪು ಆಯಿಲ್ ಸುರಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕೊಚ್ಚಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿನ್ ಕಟೌಟ್‌ಗೆ ಕಪ್ಪು ಆಯಿಲ್ ಸುರಿದು ಪ್ರತಿಭಟನೆ ನಡೆಸಿದರು.

ಮೈಕ್ರೋ ಬ್ಲಾಗಿಂಗ್ ಟ್ವಿಟರ್‌ನಲ್ಲಿ ಭಾರತದಲ್ಲಿ ರೈತರ ಪ್ರತಿಭಟನೆಗೆ ಅಂತರ ರಾಷ್ಟ್ರೀಯ ವ್ಯಕ್ತಿಗಳು ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರು.

ಜಾಗತಿಕ ಸೆಲೆಬ್ರಿಟಿಗಳ ಅಭಿಪ್ರಾಯಗಳ ಬಗ್ಗೆ ಟ್ವೀಟ್ ಮಾಡಿದ್ದ ಸಚಿನ್, ಭಾರತದ ಸಾರ್ವಭೌಮತ್ವವನ್ನು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ಬಾಹ್ಯ ಶಕ್ತಿಗಳು ದೇಶದ ಆಂತರಿಕ ವಿಷದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಹೇಳಿದ್ದರು. ಇದು ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಬೆಂಬಲ ಸೂಚಿಸುವಂತಾಗಿತ್ತು.

ಇದನ್ನೂ ಓದಿ:ಸಚಿನ್ ಟ್ವೀಟ್ ಬಗ್ಗೆ ಅಸಮಾಧಾನ; ಶರಪೋವಾ ಕ್ಷಮೆಯಾಚಿಸಿದ ಕೇರಳದ ನೆಟ್ಟಿಗರು

ಸಚಿನ್ ಟ್ವೀಟ್ ಬಗ್ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಕಳೆದ 70ಕ್ಕಿಂತಲೂ ಹೆಚ್ಚು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.