ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಾವು

Last Updated 2 ಏಪ್ರಿಲ್ 2022, 4:20 IST
ಅಕ್ಷರ ಗಾತ್ರ

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ. ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಶಂಕಿಸಲಾಗಿದೆ.

ಚೆಂಬೂರಿನ ಮಹುಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಸಾವಿಗೀಡಾಗಿದ್ದಾರೆ.

ಪ್ರಭಾಕರ್ ಸೈಲ್ ಅವರು ಡ್ರಗ್ಸ್‌ ಪ್ರಕರಣದ ಮತ್ತೊಬ್ಬ ಪ್ರಮುಖ ಸಾಕ್ಷಿ ಕೆ.ಪಿ.ಗೋಸಾವಿ ಅವರ ಅಂಗರಕ್ಷಕರಾಗಿದ್ದರು.

2021ರ ಅಕ್ಟೋಬರ್ 3ರಂದು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನಿಖಾಧಿಕಾರಿಗಳು ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಸುಮಾರು 20 ಜನರನ್ನು ಬಂಧಿಸಿದ್ದರು.

ಎನ್‌ಸಿಬಿ ದಾಳಿ ನಡೆಸಿದ ಸ್ಥಳದಲ್ಲಿ ಮತ್ತು ಎನ್‌ಸಿಬಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದ ಗೋಸಾವಿ, ಶಾರುಕ್‌ ಪುತ್ರ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಫೋಟೊ ಮತ್ತು ವಿಡಿಯೊ ತೆಗೆದಿದ್ದರು. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ತಾನು ಸ್ವತಂತ್ರ ತನಿಖಾಧಿಕಾರಿ ಎಂದು ಗೋಸಾವಿ ಹೇಳಿಕೊಂಡಿದ್ದರು. ಆದರೆ, ಎನ್‌ಸಿಬಿ ಅವರನ್ನು ಡ್ರಗ್ಸ್‌ ಪ್ರಕರಣದಲ್ಲಿ ‘ಸ್ವತಂತ್ರ ಸಾಕ್ಷಿ’ ಎಂದು ಘೋಷಿಸಿತ್ತು.

ಆರ್ಯನ್‌ ಖಾನ್‌ ಬಿಡುಗಡೆಗೆ ಎನ್‌ಸಿಬಿಯ ಅಧಿಕಾರಿಯೊಬ್ಬರು ಮತ್ತು ಕೆ.ಪಿ.ಗೋಸಾವಿ ಸಹಿತ ಇತರ ವ್ಯಕ್ತಿಗಳು ₹25 ಕೋಟಿ ಲಂಚ ಕೇಳಿದ್ದರು. ಇದರಲ್ಲಿ ₹8 ಕೋಟಿ ಹಣವನ್ನು ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರಿಗೆ ನೀಡಬೇಕೆಂದು ಗೋಸಾವಿ ಹೇಳಿದ್ದಾಗಿ ಪ್ರಭಾಕರ್ ಸೈಲ್ ಆರೋಪಿಸಿದ್ದರು.

ಸೈಲ್ ಮಾಡಿದ್ದ ಆರೋಪಗಳನ್ನು ಸಮೀರ್ ವಾಂಖೆಡೆ ಅಲ್ಲಗಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT