ಶನಿವಾರ, ಮೇ 21, 2022
27 °C

 ಮಸೂದೆಗಳಿಗೆ ಸುಲಭವಾಗಿ ಅನುಮೋದನೆ ಪಡೆಯಲು ವಿರೋಧ ಪಕ್ಷಗಳ ಸದಸ್ಯರ ಅಮಾನತು: ಖರ್ಗೆ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ತರಾತುರಿಯಲ್ಲಿ ಮಸೂದೆಗಳಿಗೆ ಅನುಮೋದನೆ  ಪಡೆಯಲು ಉದ್ದೇಶ ಪೂರ್ವಕವಾಗಿಯೇ ವಿರೋಧ ಪಕ್ಷಗಳ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಲಾಗಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

‘ಸರ್ಕಾರವು ಮಸೂದೆಗಳಿಗೆ ಸುಲಭವಾಗಿ ಅನುಮೋದನೆ ಪಡೆಯಲು ಉದ್ದೇಶಿಸಿದೆ. ಹೀಗಾಗಿಯೇ, ಉದ್ದೇಶ ಪೂರ್ವಕವಾಗಿ ವಿರೋಧ ಪಕ್ಷಗಳ 12 ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸುಗಮ ಕಲಾಪದ ದೃಷ್ಟಿಯಿಂದ ಅಮಾನತು ಆದೇಶವನ್ನು ಹಿಂಪಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ ಏನೂ ಪ್ರಯೋಜನವಾಗಿಲ್ಲ’ ಎಂದು ಖರ್ಗೆ ಹೇಳಿದ್ದಾರೆ.
 
ಮಂಗಳವಾರ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಮೂಲಕ ಅಮಾನತಾದ ವಿರೋಧ ಪಕ್ಷಗಳ ರಾಜ್ಯಸಭಾ ಸದಸ್ಯರ ಸಂಖ್ಯೆ 13ಕ್ಕೆ ಏರಿದೆ. ಅವರೂ ಸಹ ಇಂದು ಪ್ರತಿಭಟನಾನಿರತ ಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯರನ್ನು ಸೇರಿಕೊಂಡಿದ್ದಾರೆ.

ಚುನಾವಣಾ ಸುಧಾರಣಾ ಮಸೂದೆ ಮಂಡನೆ ವೇಳೆ ನಿಯಮದ ಪುಸ್ತಕವನ್ನು ಎಸೆದ ಆರೋಪದಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ವಿ. ಮುರಳಿಧರನ್ ಅವರು ಡೆರೆಕ್ ಅವರ ಅಮಾನತು ನಿರ್ಣಯವನ್ನು ಮಂಡಿಸಿದ್ದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು