ಭಾನುವಾರ, ಮಾರ್ಚ್ 26, 2023
24 °C

ಖರ್ಗೆಯಿಂದ ಕಾಂಗ್ರೆಸ್‌ ಉನ್ನತ ಸಮಿತಿ ರಚನೆ: ಸೋನಿಯಾ ಸೇರಿ 47 ಜನರಿಗೆ ಸ್ಥಾನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷರಾಗಿ ಬುಧವಾರ ಅಧಿಕಾರವಹಿಸಿಕೊಂಡಿರುವ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್‌ ಖರ್ಗೆ, ಪಕ್ಷದ ಉನ್ನತ ಸಮಿತಿ ರಚಿಸಿದ್ದಾರೆ. ಸೋನಿಯಾ ಗಾಂಧಿ, ಮನ್‌ಮೋಹನ್‌ ಸಿಂಗ್‌, ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ 47 ಮಂದಿ ಪ್ರಮುಖರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

ಈ ಸಮಿತಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಜಾಗದಲ್ಲಿ ಕೆಲಸ ಮಾಡಲಿದೆ. ಕಾರ್ಯಕಾರಿ ಸಮಿತಿಯ ಹೊಸ ಸದಸ್ಯರನ್ನು ಮುಂದಿನ ಎಐಸಿಸಿ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ.

ಪಕ್ಷಕ್ಕೆ ಹೊಸ ಅಧ್ಯಕ್ಷರು ಆಯ್ಕೆಯಾದ ಬೆನ್ನಲ್ಲೇ ಇಂದು ಬೆಳಿಗ್ಗೆ ವಾಡಿಕೆಯಂತೆ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲಾಗಿತ್ತು.

“ಕಾರ್ಯಕಾರಿ ಸಮಿತಿ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ಪ್ರಮುಖರು ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಹೇಳಿದ್ದರು.

ರಾಜೀನಾಮೆ ನೀಡಿದ ಪಕ್ಷದ ಎಲ್ಲ ಪ್ರಮುಖರನ್ನು ಈಗ ಹೊಸ ಸಮಿತಿಗೆ ಸೇರಿಸಿಕೊಳ್ಳಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು