ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಸೂಚಿಸಿದರೆ ಸ್ಪರ್ಧೆಗೆ ಖರ್ಗೆ ನಿರಾಕರಿಸುವುದಿಲ್ಲ: ಆಪ್ತ ಮೂಲಗಳು

Last Updated 28 ಸೆಪ್ಟೆಂಬರ್ 2022, 10:57 IST
ಅಕ್ಷರ ಗಾತ್ರ

ನವದೆಹಲಿ: ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದರೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಮಾಡುವುದಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹಿಂದೇಟು ಹಾಕುವುದಿಲ್ಲ ಎಂದು ಅವರ ಆಪ್ತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಅಕ್ಟೋಬರ್ 17ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ವಿಷಯದಲ್ಲಿ ಕೇಂದ್ರದ ಮಾಜಿ ಸಚಿವ ಮತ್ತು ನೆಹರು–ಗಾಂಧಿ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿಬರುತ್ತಿದೆ. ಸೆಪ್ಟೆಂಬರ್ 30ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ.

‘ಪಕ್ಷ ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುವುದಾಗಿ ಖರ್ಗೆ, ಸೋನಿಯಾ ಗಾಂಧಿಗೆ ತಿಳಿಸಿದ್ದಾರೆ’ಎಂದು ಖರ್ಗೆ ಅವರ ಆಪ್ತ ವಲಯದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಅಂತಿಮವಾಗಿ ಪಕ್ಷ(ಸೋನಿಯಾ ಗಾಂಧಿ) ಅವರಿಗೆ ಯಾವ ಸಲಹೆ ನೀಡುತ್ತದೊ ಅದನ್ನು ಅವರು ಪಾಲಿಸುತ್ತಾರೆ’ಎಂದು ಮೂಲಗಳು ತಿಳಿಸಿವೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಜೊತೆ ಖರ್ಗೆ, ಉತ್ತಮ ಸಂಪರ್ಕ ಮತ್ತ ಬಾಂಧವ್ಯವನ್ನು ಹೊಂದಿದ್ಧಾರೆ. ಇದು ಅವರ ಪ್ರಯೋಜನಕ್ಕೆ ಬರಲಿದೆ. ಅದಲ್ಲದೆ, ಅವರು ಎಂದಿನಂತೆ ತೀಕ್ಷ್ಣರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಹಿಂದಿ ಮಾತನಾಡುವ ರಾಜ್ಯಗಳಲ್ಲೂ ಖರ್ಗೆ ಅಭಿಮಾನಿ ಬಳಗವನ್ನು ಹೊಂದಿರುವುದಾಗಿ ಇನ್ನೊಬ್ಬ ನಾಯಕರು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ವಾಪಸಾತಿಗೆ ಒತ್ತಾಯಿಸಿದ್ದ ಖರ್ಗೆ, ಲೋಕಸಭೆ ಚುನಾವಣೆಗೆ ಇನ್ನೆರಡು ವರ್ಷ ಬಾಕಿ ಇದ್ದು, ದೇಶದಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯುವುದು ಅತ್ಯಂತ ದೊಡ್ಡ ಕೆಲಸ ಎಂದು ನಂಬಿರುವುದಾಗಿ ಮೂಲಗಳು ತಿಳಿಸಿವೆ.

ಪಕ್ಷ ಕೇಳಿದ್ದನ್ನು ಅವರು (ಖರ್ಗೆ) ಎಂದೂ ನಿರಾಕರಿಸಿಲ್ಲ. ಪಕ್ಷ ಏನು ತೀರ್ಮಾನ ಮಾಡುತ್ತದೋ ಅದನ್ನು ಅವರು ಪಾಲಿಸುತ್ತಾರೆ ಎಂದು ಆಪ್ತರು ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT