ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

Last Updated 20 ನವೆಂಬರ್ 2022, 13:52 IST
ಅಕ್ಷರ ಗಾತ್ರ

ನವದೆಹಲಿ: ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರಿಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರಿಗೆ ಆದ ನಷ್ಟದ ಪರಿಹಾರ ಮತ್ತು ರೈತರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ನೀಡಿದ್ದ ಭರವಸೆಗಳನ್ನು ಮೋದಿ ಸರ್ಕಾರ ಈಡೇರಿಸಿಲ್ಲ ಎಂದು ಖರ್ಗೆ ದೂರಿದರು.

ಈ ಕುರಿತು ಟ್ವೀಟ್ ಮಾಡಿರುವ ಖರ್ಗೆ, ರೈತರನ್ನು ವಾಹನದ ಅಡಿಗೆ ತುಳಿದ ಮೋದಿ ಸರ್ಕಾರ, ಶೇ 50ರಷ್ಟು ಬೆಂಬಲ ಬೆಲೆಯನ್ನು ನೀಡಿಲ್ಲ. 733 ಹುತಾತ್ಮ ರೈತರಿಗೆ ಪರಿಹಾರವನ್ನು ಕೊಟ್ಟಿಲ್ಲ. ರೈತರ ಮೇಲಿನ ಪ್ರಕರಣವನ್ನು ಹಿಂಪಡೆದಿಲ್ಲ. ಕಳೆದ ವರ್ಷ ಈ ಎಲ್ಲ ಭರವಸೆಗಳ ಮೇರೆಗೆ ರೈತರು ಕಿಸಾನ್ ವಿಜಯ ದಿವಸ ಆಚರಿಸಿದ್ದರು ಎಂದು ಹೇಳಿದರು.

ಟ್ವೀಟ್‌ನಲ್ಲಿ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆಯ ವಿಡಿಯೊವನ್ನು ಖರ್ಗೆ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT