ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸ್‌ಗಡದಲ್ಲಿ ಮಾಧ್ಯಮ ಸಿಬ್ಬಂದಿ ಕೋವಿಡ್‌ನಿಂದ ಮೃತಪಟ್ಟರೆ ₹5 ಲಕ್ಷ ಪರಿಹಾರ

Last Updated 31 ಮೇ 2021, 5:43 IST
ಅಕ್ಷರ ಗಾತ್ರ

ರಾಯ್ಪುರ: ಕರ್ತವ್ಯದಲ್ಲಿರುವ ಸಂದರ್ಭದಲ್ಲಿ ಮಾಧ್ಯಮ ಸಿಬ್ಬಂದಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟರೆ ಅವರ ಮಕ್ಕಳು ಇಲ್ಲವೆ ಅವಲಂಬಿತರಿಗೆ ಛತ್ತೀಸ್‌ಗಡ ರಾಜ್ಯ ಸರ್ಕಾರ ₹5 ಲಕ್ಷ ಪರಿಹಾರ ನೀಡಲಿದೆ.

ಭಾನುವಾರ ಈ ಬಗ್ಗೆ ಸರ್ಕಾರ ಸೂಚನೆ ಹೊರಡಿಸಿದ್ದು, ಮಾಧ್ಯಮ ಪ್ರತಿನಿಧಿಗಳ ಕಲ್ಯಾಣ ಯೋಜನೆಯಿಂದ ಪರಿಹಾರದ ಮೊತ್ತ ನೀಡಲಾಗುತ್ತದೆ ಎಂದು ಹೇಳಿದೆ.

ಜತೆಗೆ ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಧ್ಯಮ ಸಿಬ್ಬಂದಿಗಳ ಚಿಕಿತ್ಸಾ ವೆಚ್ಚವನ್ನು ಕೂಡ ಸರ್ಕಾರ ಭರಿಸಲಿದೆ. ಅಲ್ಲದೆ, ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರಿಗೆ ಆಸ್ಪತ್ರೆ ವೆಚ್ಚವನ್ನು ಮರುಪಾವತಿಸಲಿದೆ.

ಜಿಲ್ಲಾ ಸಾರ್ವಜನಿಕ ಸಂಪರ್ಕ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆಯನ್ನು ಪಡೆದುಕೊಂಡು, ಅದರಲ್ಲಿ ಅರ್ಜಿ ಸಲ್ಲಿಸಿ, ಅರ್ಹರು ಈ ಸೌಲಭ್ಯ ಪಡೆಯಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT