ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ರಾಷ್ಟ್ರೀಯ ರೈತ ದಿನ: ’ನೇಗಿಲ ಯೋಗಿಗಳಿಗೆ’ ಶುಭಾಶಯಗಳ ಮಹಾಪೂರ

Last Updated 23 ಡಿಸೆಂಬರ್ 2021, 7:04 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಇಂದು (ಡಿ. 23) ರಾಷ್ಟ್ರೀಯ ರೈತದಿನವನ್ನುಆಚರಣೆ ಮಾಡಲಾಗುತ್ತಿದೆ.

ರೈತ ಸಂಘಗಳು ಹಾಗೂ ಸಾಮಾಜಿಕ ಸಂಸ್ಥೆಗಳುಪ್ರತಿ ವರ್ಷ ಡಿಸೆಂಬರ್‌ 23ರಂದು ರಾಷ್ಟ್ರೀಯ ರೈತ ದಿನವನ್ನುಆಚರಣೆ ಮಾಡುವ ಮೂಲಕ ಪ್ರಗತಿಪರ ರೈತರನ್ನು ಸನ್ಮಾನ ಮಾಡಲಾಗುತ್ತದೆ.

ರೈತ ದಿನದ ಅಂಗವಾಗಿ ದೇಶದ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಉದ್ಯಮಿಗಳು ಸೇರಿದಂತೆ ನಾಗರಿಕರುಸಾಮಾಜಿಕ ಜಾಲತಾಣಗಳ ಮೂಲಕ ರೈತರಿಗೆ ಅಭಿನಂದನೆಗಳನ್ನು ಸಲ್ಲಿಸಿ ಮಾಜಿ ಪ್ರಧಾನಿಚರಣ್‌ ಸಿಂಗ್ ಅವರನ್ನು ಸ್ಮರಿಸಿದ್ದಾರೆ.

ಕೆಲವು ರಾಜ್ಯಗಳಲ್ಲಿ ಇದೇ ದಿನ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಕೆಲರೈತ ಸಂಘಟನೆಗಳು ಮಾನವ ಸರಪಳಿ ಹಾಗೂ ಶಾಂತಿಯುತ ಪ್ರತಿಭಟನೆಗಳನ್ನು ನಡೆಸುತ್ತಿವೆ.

ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರು ದೇಶದ ಬೆನ್ನೆಲುಬಾಗಿದ್ದಾರೆ. ದೇಶದ ಜನಸಂಖ್ಯೆಯಲ್ಲಿ ರೈತರು ಶೇ 70ರಷ್ಟಿದ್ದಾರೆ.ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಡುತ್ತಾರೆ.

ರಾಷ್ಟ್ರೀಯ ರೈತ ದಿನಾಚರಣೆ ಹಿನ್ನೆಲೆ

ದೇಶದ ಐದನೇ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಜನ್ಮದಿನವಾದ ಡಿಸೆಂಬರ್‌ 23ರಂದು ಪ್ರತಿ ವರ್ಷ ರಾಷ್ಟ್ರೀಯ ರೈತ ದಿನವನ್ನು ಆಚರಿಸಲಾಗುತ್ತಿದೆ.

ಚರಣ್‌ ಸಿಂಗ್‌ ಅವರು ತಮ್ಮ ಕಾಲದಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದರು. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಹೀಗಾಗಿ ಅವರ ಜನ್ಮದಿನವನ್ನು ರೈತ ದಿನವನ್ನಾಗಿ ಆಚರಿಸಲಾಗುತ್ತದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ 1902ರಲ್ಲಿ ಜನಿಸಿದ ಚರಣ್ ಸಿಂಗ್‌ ಅವರು, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ರೈತ ನಾಯಕರಾಗಿ ಹೊರ ಹೊಮ್ಮಿದರು. ಹಲವಾರು ಕೃಷಿ ಸ್ನೇಹಿ ನೀತಿಗಳನ್ನು ರೂಪಿಸಿದ ಸಿಂಗ್ ಅವರು 1987ರಲ್ಲಿ ನಿಧನರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT