ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲ್ಕತ್ತ ಪಾಲಿಕೆ ಚುನಾವಣೆ| ಭಾರಿ ಗೆಲುವಿನತ್ತ ಟಿಎಂಸಿ: ಯಾರಿಗೆ ಎಷ್ಟು ಸ್ಥಾನ?

Last Updated 21 ಡಿಸೆಂಬರ್ 2021, 5:40 IST
ಅಕ್ಷರ ಗಾತ್ರ

ಕೋಲ್ಕತ್ತ (ಪಶ್ಚಿಮ ಬಂಗಾಳ): ಕೋಲ್ಕತ್ತ ಪಾಲಿಕೆ (ಕೆಎಂಸಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಆರಂಭವಾಗಿದ್ದು, ತೃಣಮೂಲ ಕಾಂಗ್ರೆಸ್ ಭಾರಿ ಗೆಲುವಿನತ್ತ ಸಾಗುತ್ತಿದೆ.

ಮತ ಎಣಿಕೆಯ ಆರಂಭಿಕ ಟ್ರೆಂಡ್‌ ಪ್ರಕಾರ ಆಡಳಿತಾರೂಢ ಟಿಎಂಸಿಯು ಏಳು ಸ್ಥಾನಗಳಲ್ಲಿ ಜಯ ಸಾಧಿಸಿ 108 ಸ್ಥಾನಗಳಲ್ಲಿ ಮುನ್ನಡೆ ಕಾದುಕೊಂಡಿದೆ. ಬಿಜೆಪಿ ನಾಲ್ಕರಲ್ಲಿ ಮುಂದಿದ್ದರೆ, ಸಿಪಿಎಂ, ಕಾಂಗ್ರೆಸ್‌ ತಲಾ ಎರಡು ಸ್ಥಾನಗಳಲ್ಲಿ ಪಕ್ಷೇತರರು ಮೂರು ಸ್ಥಾನಗಳಲ್ಲಿ ಮುನ್ನಡೆ ಕಾಯ್ದೆಕೊಂಡಿದ್ದಾರೆ. ಕೋಲ್ಕತ್ತ ಮುನ್ಸಿಪಲ್ ಕಾರ್ಪೊರೇಷನ್ ಒಟ್ಟು 144 ವಾರ್ಡ್‌ಗಳನ್ನು ಹೊಂದಿದೆ.

ಕಳೆದ ಬಾರಿಯ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ 114 ಸ್ಥಾನಗಳಲ್ಲಿ ಗೆದ್ದಿತ್ತು. ಕಾಂಗ್ರೆಸ್‌ 5, ಎಡ ಪಕ್ಷಗಳು 15, ಬಿಜೆಪಿ 7 ವಾರ್ಡ್‌ಗಳಲ್ಲಿ ಗೆದ್ದಿತ್ತು. ಮೂವರು ಪಕ್ಷೇತರರು ಗೆದ್ದಿದ್ದರು. ಆದರೆ, ಈ ಬಾರಿಯ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಹಿಂದಿನ ದಾಖಲೆಗಳನ್ನು ಮುರಿಯುವ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT