ಸೋಮವಾರ, ನವೆಂಬರ್ 28, 2022
20 °C

ಕೋಲ್ಕತ್ತದಲ್ಲಿ ವ್ಯಕ್ತಿ ಬಂಧನ, 4 ಬಂದೂಕು ವಶ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜಧಾನಿಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, 4 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.

ಮಾಹಿತಿಯ ಮೇರೆಗೆ ಡುಂಡುಂ ಪ್ರದೇಶದಲ್ಲಿನ ಆರೋಪಿ ಮನೆ ಮೇಲೆ ದಾಳಿ ನಡೆಸಿದ್ದು, 7ಎಂಎಂ ಪಿಸ್ತೂಲು ಮತ್ತು ನಾಡಕೋವಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಆತನನ್ನು ನ್ಯಾಯಾಂಗಕ್ಕೆ ಪ್ರಸ್ತುಪಡಿಸಿ ವಶಕ್ಕೆ ಪಡೆಯಲಿದ್ದೇವೆ. ಶಂಕಿತ ಆರೋಪಿ, ಸಶಸ್ತ್ರ ಪೂರೈಕೆ‌ಯಲ್ಲಿ ಭಾಗಿಯಾಗಿರುವ ಸಂಶಯವಿದ್ದು ತನಿಖೆ ನಡೆಸಲಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು