ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾದ ಕೊನಾರ್ಕ್ ಸೂರ್ಯ ದೇವಾಲಯದಲ್ಲಿ ದರ್ಶನಕ್ಕೆ ಅವಕಾಶ

Last Updated 1 ಸೆಪ್ಟೆಂಬರ್ 2020, 10:23 IST
ಅಕ್ಷರ ಗಾತ್ರ

ಭುವನೇಶ್ವರ: ಕೊರೊನಾದಿಂದಾಗಿ ಐದು ತಿಂಗಳಿನಿಂದ ಮುಚ್ಚಿದ್ದ ಒಡಿಶಾದ ಕೊನಾರ್ಕ್ ಸೂರ್ಯ ದೇವಾಲಯದ ದ್ವಾರಗಳನ್ನು ಮಂಗಳವಾರದಿಂದ ತೆರೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಹಲವು ದಿನಗಳ ಹಿಂದೆಯೇರಾಜ–ರಾಣಿ ದೇವಸ್ಥಾನ, ಉದಯಗಿರಿ, ಲಲಿತಗಿರಿ ಸ್ಮಾರಕಗಳನ್ನು ತೆರೆಯಲಾಗಿತ್ತು. ಆದರೆ ಪ್ರವಾಸಿಗರ ಆಕರ್ಷಣೀಯ ತಾಣವಾದ ಕೊನಾರ್ಕ್‌ ಸೂರ್ಯ‌ ದೇವಾಲಯವನ್ನು ಮಂಗಳವಾರದಿಂದ(ಸೆ.01) ತೆರೆಯಲಾಗಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯ ಹಿರಿಯ ಅಧಿಕಾರಿಅರುಣ್‌ ಕುಮಾರ್‌ ಮಲಿಖ್‌ ಅವರು ಹೇಳಿದರು.

‘ಕೋವಿಡ್‌–19 ಮಾರ್ಗಸೂಚಿಗೆ ಅನುಗುಣವಾಗಿ, ಪ್ರವಾಸಿಗರಿಗೆ ಸ್ಮಾರಕಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಸ್ಮಾರಕಗಳಿಗೆ ಭೇಟಿ ನೀಡುವವರು ಮುಖಗವಸು ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಅಲ್ಲದೇ ಪ್ರವಾಸಿಗರಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿದ ಬಳಿಕ ಒಳ ಪ್ರವೇಶಿಸಲು ಅನುಮತಿ ನೀಡಲಾಗುವುದು’ ಎಂದು ಅವರು ಮಾಹಿತಿ ನೀಡಿದರು.

‘ಭಕ್ತರು ಆನ್‌ಲೈನ್‌ ಮೂಲಕ ಶುಲ್ಕ ಪಾವತಿ ಮಾಡಬಹುದು. ಎರಡು ಹಂತದಲ್ಲಿ ಪ್ರತಿನಿತ್ಯ ಕೇವಲ 2,500 ಜನರಿಗೆ ಮಾತ್ರ ದೇವಸ್ಥಾನದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು. ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆ ತನಕ 1,500 ಭಕ್ತರಿಗೆ ನಂತರ 1,000 ಜನರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT