ಸೋಮವಾರ, ಸೆಪ್ಟೆಂಬರ್ 27, 2021
22 °C
ಕಳೆದ ವರ್ಷ ಆಗಸ್ಟ್‌ 7ರಂದು ಸಂಭವಿಸಿದ್ದ ಅವಘಡ * 19 ಜನ ಮೃತಪಟ್ಟಿದ್ದರು

ಕೋಯಿಕ್ಕೋಡ್‌: ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಅಪಘಾತ; ಅಂತಿಮ ಪರಿಹಾರ ವಿತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇರಳದ ಕೋಯಿಕ್ಕೋಡ್‌ನಲ್ಲಿ ಕಳೆದ ವರ್ಷ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ವಿಮಾನ ಅಪಘಾತಕ್ಕೀಡಾದ ಘಟನೆಯಲ್ಲಿ ಗಾಯಗೊಂಡವರು ಹಾಗೂ ಮೃತರ ಕುಟುಂಬಗಳಿಗೆ ಅಂತಿಮ ಪರಿಹಾರವನ್ನು ವಿತರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಈ ದುರ್ಘಟನೆಯಲ್ಲಿ ಗಾಯಗೊಂಡಿದ್ದ 165 ಜನರ ಪೈಕಿ 80 ಜನರು ಪರಿಹಾರವನ್ನು ಸ್ವೀಕರಿಸಿದ್ದಾರೆ. ಮೃತಪಟ್ಟ 19 ಜನ ಪ್ರಯಾಣಿಕರ ಕುಟುಂಬಸ್ಥರು ಹಾಗೂ ಗಾಯಗೊಂಡವರ ಪೈಕಿ 85 ಜನರ ಕುಟುಂಬಗಳ ಸದಸ್ಯರು ಪರಿಹಾರ ಮೊತ್ತವನ್ನು ಸ್ವೀಕರಿಸಬೇಕಿದೆ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ತಿಳಿಸಿದೆ.

‘ಗಾಯಗೊಂಡವರು ಹಾಗೂ ಮೃತರ ಕುಟುಂಬದವರ ಪೈಕಿ ಯಾರೂ ಪರಿಹಾರವನ್ನು ತಿರಸ್ಕರಿಸಿಲ್ಲ. ಪರಿಹಾರಕ್ಕೆ ತಕರಾರು ಎತ್ತಿ ಯಾರೂ ಸಹ ಕೋರ್ಟ್‌ ಮೊರೆ ಹೋಗಿಲ್ಲ’ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ವಕ್ತಾರ ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್‌ 7ರಂದು ದುಬೈಯಿಂದ ಬಂದಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು (ಐಎಕ್ಸ್‌ 1344) ಕೋಯಿಕ್ಕೋಡ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಹೋಳಾಗಿತ್ತು. 

ಅಪಘಾತದಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಮೃತಪಟ್ಟ ಪ್ರಯಾಣಿಕರ ಕುಟುಂಬದವರಿಗೆ ತಲಾ ₹10 ಲಕ್ಷ, 12 ವರ್ಷದ ಒಳಗಿನವರು ಮೃತಪಟ್ಟಿದ್ದರಿಗೆ ಅವರ ಕುಟುಂಬದವರಿಗೆ ತಲಾ ₹ 5 ಲಕ್ಷ ಮತ್ತು ತೀವ್ರವಾಗಿ ಗಾಯಗೊಂಡವರಿಗೆ ತಲಾ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ ತಲಾ ₹50 ಸಾವಿರವನ್ನು ಮಧ್ಯಂತರ ಪರಿಹಾರ ನೀಡುವುದಾಗಿ ಘೋಷಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು