ಶನಿವಾರ, ಸೆಪ್ಟೆಂಬರ್ 26, 2020
22 °C

ಕೇರಳ ವಿಮಾನ ದುರಂತ: ಮೃತ ಸಹ ಪೈಲಟ್‌ ಅಖಿಲೇಶ್‌ ಕುಮಾರ್‌ಗೆ ಶ್ರದ್ದಾಂಜಲಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋಯಿಕ್ಕೋಡ್‌ನ ಕರಿಪ್ಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟ ಸಹ ಪೈಲಟ್‌ ಅಖಿಲೇಶ್‌ ಕುಮಾರ್‌ ಅವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಭಾನುವಾರ ಬೆಳಗಿನ ಜಾವ 2 ಗಂಟೆಗೆ ಅಖಿಲೇಶ್‌ ಕುಮಾರ್‌ ಅವರ ಮೃತದೇಹವು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲು‍ಪಿದೆ. ಈ ವೇಳೆ ವಿವಿಧ ವಿಮಾನಯಾನ ಸಂಸ್ಥೆಯ 200 ಕ್ಕೂ ಹೆಚ್ಚು ಪೈಲೆಟ್‌ ಮತ್ತು ಸಿಬ್ಬಂದಿ ಅಖಿಲೇಖ್‌ ಕುಮಾರ್‌ಗೆ ಶ್ರದ್ಧಾಂಜಲಿ ನೀಡಿದರು.

ಶುಕ್ರವಾರ ಸಂಜೆ 7.40ಕ್ಕೆ ದುಬೈಯಿಂದ ಬಂದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌  ವಿಮಾನ  ಕೋಯಿಕ್ಕೋಡ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೆ ಗುರಿಯಾಗಿತ್ತು. ದುರಂತದಲ್ಲಿ ವಿಮಾನದ ಪೈಲಟ್ ಕ್ಯಾಪ್ಟನ್‌ ದೀಪಕ್‌ ಸಾಠೆ ಮತ್ತು ಸಹ ಪೈಲಟ್‌ ಅಖಿಲೇಶ್ ಕುಮಾರ್ ಅವರ ಸೇರಿದಂತೆ 16 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು