ಶನಿವಾರ, ಸೆಪ್ಟೆಂಬರ್ 26, 2020
27 °C
ಕೇರಳ ತಲುಪಿದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಮುಖ್ಯ ಅಧಿಕಾರಿಗಳು

ಕೇರಳ ವಿಮಾನ ದುರಂತ: ಸಂತ್ರಸ್ತರಿಗೆ ನೆರವು ನೀಡಲು ಮೂರು ವಿಶೇಷ ವಿಮಾನಗಳು

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿಮಾನ ಅಪಘಾತದಿಂದ ಸಂಕಷ್ಟದಲ್ಲಿ ಸಿಲುಕಿರುವ ಪ್ರಯಾಣಿಕರ ಕುಟುಂಬಕ್ಕೆ ನೆರವಾಗಲು ಮೂರು ವಿಶೇಷ ವಿಮಾನಗಳನ್ನು ಕೇರಳದ ಕೋಯಿಕ್ಕೋಡ್‌ಗೆ ಕಳುಹಿಸಲಾಗಿದೆ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಯಾನ ಸಂಸ್ಥೆ ತಿಳಿಸಿದೆ.

ವಿಮಾನ ಅಪಘಾತದಲ್ಲಿ ಸಂತ್ರಸ್ತರಾಗಿರುವ ಕುಟುಂಬ ಸದಸ್ಯರಿಗೆ ಮಾನವೀಯ ನೆರವು ನೀಡಲು ದೆಹಲಿಯಿಂದ ಎರಡು ಮತ್ತು ಮುಂಬೈನಿಂದ ಒಂದು ವಿಶೇಷ ವಿಮಾನಗಳನ್ನು ಕೋಯಿಕ್ಕೋಡ್‌ಗೆ ಕಳುಹಿಸಲಾಗಿದೆ.

ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಬನ್ಸಾಲ್ ಮತ್ತು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಶ್ಯಾಮ್‌ಸುಂದರ್‌ ಅವರು ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

ತುರ್ತು ಪ್ರತಿಕ್ರಿಯೆ ವಿಭಾಗದ ನಿರ್ದೇಶಕರು ಕ್ಯಾಲಿಕಟ್‌ನಲ್ಲಿರುವ ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಅದೇ ರೀತಿ ಮುಂಬೈ, ದೆಹಲಿ ಮತ್ತು ದುಬೈನ ತುರ್ತು ಪ್ರತಿಕ್ರಿಯಾ ವಿಭಾಗದೊಂದಿಗೂ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನಯಾನ ಅಪಘಾತ ತನಿಖಾ ಸಂಸ್ಥೆ (ಎಎಐಪಿ), ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಕ ಮತ್ತು ವಿಮಾನ ಸುರಕ್ಷತಾ ವಿಭಾಗಗಳು ಈಗಾಗಲೇ ಅಪಘಾತ ಸ್ಥಳವನ್ನು ತಲುಪಿದ್ದು, ಪ್ರಕರಣದ ತನಿಖೆ ಕೈಗೊಂಡಿವೆ. 

ಕೊರೊನಾ ಲಾಕ್‌ಡೌನ್‌ನಿಂದಾಗಿ ದುಬೈನಲ್ಲಿ ಸಿಲುಕಿದ್ದ 190 ಭಾರತೀಯ ನಿವಾಸಿಗಳನ್ನು ಕರೆತರುತ್ತಿದ್ದ ಬೋಯಿಂಗ್ 737 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ, ಶುಕ್ರವಾರ ಭಾರಿ ಮಳೆಯಿಂದಾಗಿ ಕೋಯಿಕ್ಕೋಡ್‌ನ ವಿಮಾನ ನಿಲ್ದಾಣದ ರನ್‌ವೇನಲ್ಲಿ ಇಳಿಯುವ ವೇಳೆ 35 ಅಡಿ ಕಣಿವೆಗೆ ಬಿದ್ದು ಅಪಘಾತಕ್ಕೀಡಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು